spot_img
Wednesday, December 4, 2024
spot_img

ತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಶಂಕು ಸ್ಥಾಪನೆ | ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

ಜನಪ್ರತಿನಿಧಿ (ತುಮಕೂರು) : ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ  ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ತುಮಕೂರು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಕ್ರೀಡಾ ಪ್ರಗತಿಗೆ ಪೂರಕವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಶಂಕುಸ್ಥಾಪನೆ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಆದಷ್ಟು ಶೀಘ್ರದಲ್ಲಿ  ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸುವಂತೆ ಸೂಚನೆ ನೀಡಿದ್ದೇನೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದು ಭರವಸೆ ನೀಡಿದರು.

ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ಒಡ್ಡಿರುವ ಸುದ್ದಿ ನೋಡಿದೆ. ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!