spot_img
Sunday, February 15, 2026
spot_img

ವರ್ಧಮಾನ ಪ್ರಾಥಮಿಕ ಶಾಲೆ, ಸಾಣೂರು: ರಾಜ್ಯ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ 

ಕಾರ್ಕಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ದಿನಾಂಕ 01.12.2024ರಂದು ತುಮಕೂರಿನಲ್ಲಿ ಆಯೋಜಿಸಲಾದ ಗೀತಾ ಗಾಯನ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ವರ್ಧಮಾನ ಪ್ರಾಥಮಿಕ ಶಾಲೆ, ಸಾಣೂರು, ಕಾರ್ಕಳದ ಕಬ್ ದಳದ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆ ಮೆರೆದಿದ್ದಾರೆ.
ಈ ಸ್ಪರ್ಧೆಯಲ್ಲಿ ಆದಿತ್ ವರ್ಮ ಜೈನ್, ಮೇದಾಂಶ್ ಪಡುಮಲೆ, ಆರ್ಯನ್ ಜೈನ್, ಪ್ರಜ್ಞಾನ್ ಕೋಟ್ಯಾನ್, ಅಮೋಘ್ ಬಾಳಿಗ, ಹಾಗೂ ದೃವ್ ನಾಯಕ್ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಂಚಾಲಕರಾದ ಶಶಿಕಲಾ ಕೆ. ಹೆಗ್ಡೆ, ಕುಮಾರಯ್ಯ ಹೆಗ್ಡೆ, ಆಡಳಿತಾಧಿಕಾರ ಕರ್ತವ್ಯ ಜೈನ್, ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!