spot_img
Wednesday, December 4, 2024
spot_img

ಜಿಲ್ಲೆಯ ಬಿಜೆಪಿ ಶಾಸಕರು ಸರ್ಕಾರದ ಕೆಲಸ, ಕಾರ್ಯಗಳಲ್ಲಿ ಕೈಜೋಡಿಸಲಿ : ವಿಕಾಸ್‌ ಹೆಗ್ಡೆ ಆಕ್ರೋಶ

ಜನಪ್ರತಿನಿಧಿ (ಉಡುಪಿ) : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಉಡುಪಿ ಜಿಲ್ಲೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಹಿರಿಯ ಭೂ ವಿಜ್ಞಾನಿಗಳನ್ನು ನಿಯೋಜನೆ ಮಾಡಿ ಗಣಿಗಾರಿಕೆಯಲ್ಲಿನ ಅಕ್ರಮವನ್ನು ಹತೋಟಿಗೆ ತಂದು ಸಕ್ರಮ ಗಣಿಗಾರಿಕೆಗೆ ಅವಕಾಶ ಮಾಡಿಕೊಡುವುದರ ಮೂಲಕ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ರಾಜಧನ ಸಂಗ್ರಹ ಮಾಡುವುದರ ಮೂಲಕ ಹಿಂದೆ  ಅಕ್ರಮ ಗಾಣಿಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿದ್ದ ಕೋಟ್ಯಂತರ ರೂಪಾಯಿ ನಷ್ಟವನ್ನು ಕಡಿಮೆ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಹೇಳಿದ್ದಾರೆ.

ಇವತ್ತು ಬಿಜೆಪಿ ಜನಪ್ರತಿನಿಧಿಗಳು ಇಂತಾ ಪ್ರಾಮಾಣಿಕ ಅಧಿಕಾರಿಗಳ ಕರ್ತವ್ಯವನ್ನು ಟೀಕಿಸುವುದು ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಪರೋಕ್ಷವಾಗಿ ಬೆಂಬಲ ನೀಡಿದಂತೆ. ಕಾಂಗ್ರೆಸ್ ಸರ್ಕಾರ ಜನಪರವಾಗಿದ್ದು ಜನರ ಅಗತ್ಯತೆಗಳನ್ನು ಕಾನೂನುಬದ್ಧವಾಗಿ ಪೂರೈಸಲು ಕಾಂಗ್ರೆಸ್ ಸರ್ಕಾರ ಯಾವತ್ತೂ ಸಿದ್ಧವಿದೆ ಅದನ್ನು ಬಿಟ್ಟು ಅಧಿಕಾರಿಗಳಿಂದ ತಪ್ಪನ್ನು ಮಾಡಿಸಲು ಕಾಂಗ್ರೆಸ್ ಸರ್ಕಾರ ಯಾವತ್ತೂ ಸಿದ್ದವಿಲ್ಲ. ಈಗಾಗಲೇ ಉಸ್ತುವಾರಿ ಸಚಿವರು ಕೆ ಡಿ ಪಿ ಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿರುತ್ತಾರೆ. ಸರ್ಕಾರದ ಭಾಗವಾಗಿರುವ ಜಿಲ್ಲೆಯ ಶಾಸಕರುಗಳು ಕೇವಲ ಸರ್ಕಾರವನ್ನು ಟೀಕಿಸುವುದು ಮಾತ್ರ ತಮ್ಮ ಕರ್ತವ್ಯವೆಂದು ತಿಳಿಯದೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಜೊತೆ ಕೈಜೋಡಿಸಲಿ ಎಂದವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!