spot_img
Wednesday, December 4, 2024
spot_img

ದೇಶದ್ರೋಹಿಗಳ ಮೇಲೆ ಪ್ರಕರಣಗಳನ್ನು ಹಿಂಪಡೆದ ಕಾಂಗ್ರೆಸ್‌ ಸರ್ಕಾರ, ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸುತ್ತಿದೆ : ವಿಜಯೇಂದ್ರ ಯಡಿಯೂರಪ್ಪ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೆಡೆ ದೇಶ ದ್ರೋಹಿಗಳು ಹಾಗೂ ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಇರುವ ಪ್ರಕರಣಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತಾ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ವಿಜಯೇಂದ್ರ ಯಡಿಯೂರಪ್ಪ ವರದಿಗಾರರೊಂದಿಗೆ ಅವರು ಮಾತನಾಡಿದರು.

ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮೊನ್ನೆ ನಡೆದ ಪ್ರತಿಭಟನೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಚಂದ್ರಶೇಖರನಾಥ ಮಹಾ ಸ್ವಾಮೀಜಿಗಳು ರಾಜ್ಯ  ಕಾಂಗ್ರೆಸ್ ಸರ್ಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರ ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ. ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಬಗ್ಗೆ ತಿಳಿಸಿದ್ದಲ್ಲದೆ ಅಗತ್ಯ ಉತ್ತರವನ್ನು ಪತ್ರ ಮೂಲಕ ನೀಡಿದ್ದರು. ಆದರೂ ಕೂಡ, ಒತ್ತಡ ಹಾಕುತ್ತಿರುವುದು ಸರಿಯಲ್ಲ ಎಂದು ಖಂಡಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ವಿಷಯ ಮುಂದಿಟ್ಟು ರೈತರನ್ನು ಒಕ್ಕಲೆಬ್ಬಿಸುತ್ತಿದೆ, ಮಠ ಮಾನ್ಯಗಳ ಜಮೀನು ಕಿತ್ತುಕೊಳ್ಳುತ್ತಿದೆ. ಅಧಿಕಾರಿಗಳ ಮೂಲಕ ನೋಟಿಸ್ ಕೊಡುತ್ತಿದೆ ಎಂದು ಟೀಕಿಸಿದರು. ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆದಿದ್ದು, ರೈತರು ಬೀದಿಗೆ ಇಳಿದಿದ್ದಾರೆ ಎಂದು ವಿವರಿಸಿದರು.

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ನಕಲಿ ನೋಟಿಸ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಈ ಕುರಿತು ಪದೇ ಪದೇ ಮಾತನಾಡುವುದಿಲ್ಲ. ನೋಟಿಸ್ ಅಸಲಿಯೇ ನಕಲಿಯೇ ಎಂಬುದು ಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!