spot_img
Wednesday, April 1, 2026
spot_img

ಡಿ.7ರಂದು ಕುಂದಾಪುರದಲ್ಲಿ ಮೊಗವೀರರ ಸಾಂಸ್ಕೃತಿಕ ಸಿಂಚನ-‘ಹೆಜ್ಜೆ ಗೆಜ್ಜೆ’ ಸಾಂಸ್ಕೃತಿಕ ಸ್ವರ್ಧೆ

ಕುಂದಾಪುರ: ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ “ಹೆಜ್ಜೆ -ಗೆಜ್ಜೆ” ಮೊಗವೀರ ಸಾಂಸ್ಕೃತಿಕ ಸಿಂಚನವು ಡಿಸೆಂಬರ್ 7 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ.

ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಜಯಂತ್ ಅಮೀನ್ ಅಧ್ಯಕ್ಷತೆ ವಹಿಸಲಿದ್ದು, ಉದ್ಯಮಿಗಳಾದ ಆನಂದ ಸಿ. ಕುಂದರ್, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಜಯ.ಸಿ ಕೋಟ್ಯಾನ್, ರಾಜು ಮೆಂಡನ್ ವಂಡ್ಸೆ, ಉದಯಕುಮಾರ್ ಹಟ್ಟಿಯಂಗಡಿ, ಸತೀಶ್ ಅಮೀನ್ ಬಾರ್ಕೂರು, ದಿನೇಶ್ ಬಿ ಕಾಂಚನ್, ಲೋಹಿತಾಶ್ವ ಆರ್ ಕುಂದರ್, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಮೊಗವೀರ ಯುವ ಸಂಘಟನೆಯ ವಿವಿಧ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!