spot_img
Wednesday, April 1, 2026
spot_img

ಅಮೃತಸರದ ಸ್ವರ್ಣ ಮಂದಿರದಲ್ಲೇ SAD ಮುಖ್ಯಸ್ಥ, ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ | ಆರೋಪಿ ಬಂಧನ

ಜನಪ್ರತಿನಿಧಿ (ಅಮೃತಸರ): ಅಮೃತಸರದ ಸ್ವರ್ಣಮಂದಿರ ಹೊರಗೆ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆಗೈಯಲು ಯತ್ನಿಸಿದ ಘಟನೆ ನಡೆದಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಗಾಲಿಕುರ್ಚಿಯಲ್ಲಿ ಕುಳಿತಿದ್ದ ವೇಳೆ ಸುಖ್ ಬೀರ್ ಸಿಂಗ್ ಬಾದಲ್ ಮೇಲೆ ಗುರಿಯಾಗಿರಿಸಿ ವ್ಯಕ್ತಿಯೊಬ್ಬ ಹಾರಿಸಿದ ಗುಂಡು ಗೋಡೆಗೆ ತಗುಲಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡು ಹಾರಿಸಿದ ನರೇನ್ ಸಿಂಗ್ ಎಂಬ ವ್ಯಕ್ತಿಯನ್ನು ಗೋಲ್ಡನ್ ಟೆಂಪಲ್‌ ಹೊರಗೆ ನಿಂತಿದ್ದ ಕೆಲವರು ವಶಪಡಿಸಿಕೊಂಡಿದ್ದಾರೆ.

ದಾಳಿ ನಡೆದಾಗ ಸುಖ್ ಬೀರ್ ಸಿಂಗ್ ಬಾದಲ್ ಗೋಲ್ಡನ್ ಟೆಂಪಲ್ ಹೊರಗೆ ‘ಸೇವಾದಾರ’ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಗೋಲ್ಡನ್ ಟೆಂಪಲ್‌ನಲ್ಲಿ ಅಕಾಲ್ ತಖ್ತ್ ನೀಡಿದ ‘ತಂಖಾ’ (ಧಾರ್ಮಿಕ ಶಿಕ್ಷೆ) ಸೇವೆ ಸಲ್ಲಿಸುತ್ತಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!