spot_img
Friday, January 17, 2025
spot_img

ಕಾಂಗ್ರೆಸ್‌ ಹೈಕಮಾಂಡ್ ಸಿದ್ದರಾಮಯ್ಯನವರ ಮುಂದೆ ಮಂಡಿಯೂರಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯ : ವಿಜಯೇಂದ್ರ

ಜನಪ್ರತಿನಿಧಿ (ಬೆಂಗಳೂರು) : ಮುಡಾಗೆ ಸಾವಿರಾರು ಕೋಟಿ ರೂ ನಷ್ಟವಾಗಿರುವುದನ್ನು ಅಂದಿನ ಜಿಲ್ಲಾಧಿಕಾರಿಗಳೇ ಸರ್ಕಾರಕ್ಕೆ ಪತ್ರ ಬರೆದು ತಿಳಿಸಿದ್ದರು, ಈ ಹಿನ್ನೆಲೆಯಲ್ಲಿ ದಾಖಲಾದ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯವು (ED)ನಡೆಸುತ್ತಿರುವ ತನಿಖೆ ವಾಸ್ತವ ಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತಿದೆ. ಇದರ ವಾಸನೆಯನ್ನು ಅರಿತೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಹೈಕಮಾಂಡ್ ಬೆದರಿಸಲು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ವರಿಷ್ಠರಿಗೂ ಮುಖ್ಯಮಂತ್ರಿಗಳು ಭಂಡತನದಿಂದ ಅಧಿಕಾರದಲ್ಲಿ ಮುಂದುವರೆಯುವುದು ಬೇಕಿಲ್ಲ. ಈ ಕಾರಣಕ್ಕಾಗಿಯೇ ಹಾಸನದ ಸಿದ್ದರಾಮಯ್ಯನವರ ಸ್ವಪ್ರತಿಷ್ಠೆಯ ಸ್ವಾಭಿಮಾನಿ ಸಮಾವೇಶಕ್ಕೆ ಕಡಿವಾಣ ಹಾಕಿದ್ದಾರೆ. ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ  ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ  ಸಿದ್ದರಾಮಯ್ಯನವರ ಪಾತ್ರವನ್ನು ಸಾಕ್ಷಿಕರಿಸುತ್ತಿತ್ತು. ಇದರ ಆಧಾರದ ಮೇಲೆ ಉಚ್ಛ ನ್ಯಾಯಾಲಯ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯ ನಿರ್ಧಾರವನ್ನು ಎತ್ತಿ ಹಿಡಿದು ತನಿಖೆಗೆ ಮುಕ್ತ ಅವಕಾಶ ಕಲ್ಪಿಸಿ ಕೊಟ್ಟಿತ್ತು ಎಂದಿದ್ದಾರೆ.

ಲೋಕಾಯುಕ್ತದ ತನಿಖೆಯ ದಿಕ್ಕು ಅನುಮಾನ ಮೂಡಿಸಿರುವ ನಡುವೆ ಜಾರಿ ನಿರ್ದೇಶನಾಲಯದಿಂದ ಹೊರಬಂದಿರುವ ವರದಿ ಮುಖ್ಯಮಂತ್ರಿಗಳ ಮುಖವಾಡ ಬಯಲು ಮಾಡಿದೆ. ಇಷ್ಟಾಗಿಯೂ ತಮ್ಮ ಭಂಡತನ ಮುಂದುವರಿಸಲು ನಿರ್ಧರಿಸಿರುವ ಸಿದ್ದರಾಮಯ್ಯನವರು ದೆಹಲಿಯ ಹಿಂದಿನ ಮುಖ್ಯಮಂತ್ರಿ ಕೇಜ್ರಿವಾಲರಂತೆ ‘ಜೈಲಿಗೆ ಹೋದರೂ ಮುಖ್ಯಮಂತ್ರಿ ಗಾದಿ ಬಿಡುವುದಿಲ್ಲ’ ಎಂಬ ಶಪಥ ಕೈಗೊಂಡಂತಿದೆ. ನಿಶಕ್ತ ಕಾಂಗ್ರೆಸ್‌ ಹೈಕಮಾಂಡ್ ಸಿದ್ದರಾಮಯ್ಯನವರ ಮುಂದೆ ಮಂಡಿಯೂರಿ ಕುಳಿತಿರುವುದು ಕರ್ನಾಟಕದ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ ಎಂದವರು ಹೇಳಿದ್ದಾರೆ.

https://x.com/BYVijayendra/status/1864173259714888019

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!