spot_img
Wednesday, April 1, 2026
spot_img

ಮುಡಾ ಹಗರಣ : ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ | ಜನವರಿ 25ಕ್ಕೆ ಮುಂದಿನ ವಿಚಾರಣೆ

ಜನಪ್ರತಿನಿಧಿ (ಬೆಂಗಳೂರು) : ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮೋದನೆ ನೀಡಿರುವ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಈ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು(ಗುರುವಾರ) ರಾಜ್ಯ ಸರ್ಕಾರ ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು(ಗುರುವಾರ) ನಡೆಯಿತು. ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರ ವಿಭಾಗೀಯ ನ್ಯಾಯಪೀಠ ವಾದ-ಪ್ರತಿವಾದ ಅಲಿಸಿ ಮುಂದಿನ ವಿಚಾರಣೆಯನ್ನು ಜನವರಿ 25, 2025 ರಂದು ಮುಂದೂಡಿ ಆದೇಶಿಸಿದೆ.

ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಅಕ್ಟೋಬರ್ 24ರಂದು ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಸೆಪ್ಟೆಂಬರ್ 24 ರಂದು ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರ ಅನುಮೋದನೆಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಸಾಮಾಜಿಕ ಕಾರ್ಯಕರ್ತರಾದ ಟಿಜೆ ಅಬ್ರಹಾಂ, ಪ್ರದೀಪ್ ಕುಮಾರ್ ಮತ್ತು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಮೂರು ಅರ್ಜಿಗಳ ಆಧಾರದ ಮೇಲೆ ಪ್ರಧಾನ ಪ್ರದೇಶದಲ್ಲಿ ಮುಡಾದಿಂದ 14 ಸೈಟ್‌ಗಳ ಹಂಚಿಕೆಯಲ್ಲಿನ ಅಕ್ರಮಗಳ ಆರೋಪದಲ್ಲಿ ತಮ್ಮ ವಿರುದ್ಧದ ತನಿಖೆಗೆ ಗೆಹ್ಲೋಟ್ ಅವರ ಅನುಮೋದನೆಯ ಕಾನೂನುಬದ್ಧತೆಯನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದರು.

ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶದ ನಂತರ, ಮರುದಿನವೇ ಇಲ್ಲಿನ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿ, ಡಿಸೆಂಬರ್ 24ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತು.

ಮೈಸೂರಿನ ಲೋಕಾಯುಕ್ತ ಪೊಲೀಸರು ಸೆ.27ರಂದು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!