spot_img
Wednesday, April 1, 2026
spot_img

ಉಡುಪಿ ಜಿಲ್ಲೆಯಲ್ಲಿ ಸಿ.ಎನ್.ಜಿ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವರನ್ನು ಸಂಸದ ಕೋಟ ಭೇಟಿ

(ಜನಪ್ರತಿನಿಧಿ ವಾರ್ತೆ) ಉಡುಪಿ ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ಕೊರತೆಯಿಂದ ಬಡ ರಿಕ್ಷಾ ಚಾಲಕರು ಮತ್ತು ಇತರ ಸಿ.ಎನ್.ಜಿ ಬಳಕೆಯ ವಾಹನ ಮಾಲೀಕರು ಪರದಾಡುವಂತಾಗಿದೆ. ದಿನಗಟ್ಟಲೆ ವಾಹನ ಸವಾರರು ಸಿ.ಎನ್.ಜಿ ಬಂಕ್ ನೆದುರು ಪೂರೈಕೆಗಾಗಿ ನಿಲ್ಲುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರಕಾರ ಮಧ್ಯಪ್ರವೇಶಿಸಿ, ಸಮಸ್ಯೆ ಪರಿಹರಿಸಬೇಕೆಂದು ಸಂಸದ ಕೋಟ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯಲ್ಲಿ 21,000 ಕೆಜಿ ಸಿ.ಎನ್.ಜಿ ಬೇಡಿಕೆ ಇದ್ದು ಇದೀಗ 14,000 ಕೆಜಿ ಪೂರೈಕೆಯಾಗುತ್ತಿದೆ. 8 ಸಿ.ಎನ್.ಜಿ ಬಂಕ್ ಗಳು ಕಾರ್ಯನಿರ್ವಹಿಸುತ್ತಿದ್ದು ಹೆಚ್ಚುವರಿ ಬಂಕಗಳನ್ನು ಮಂಜೂರು ಮಾಡಬೇಕೆಂದು ಮತ್ತು ಸಿ.ಎನ್.ಜಿ ಬೇಡಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಪೂರೈಸಲು ಸಂಬಂಧಿತ ಕಂಪನಿಗಳಿಗೆ ಆದೇಶ ನೀಡಬೇಕೆಂದು ಸಚಿವರಿಗೆ ಮನವರಿಕೆ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವರು ಕೂಡಲೆ ಕ್ರಮ ಜರುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!