spot_img
Friday, December 27, 2024
spot_img

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

ಕುಂದಾಪುರ: ಡಿಸೆಂಬರ್ 5ರಂದು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಂತಿ ಗಿರಿಧರ್ ಮಾತನಾಡಿ ನಮ್ಮ ಆಶಯ ಮತ್ತು ಗುರಿ ದೊಡ್ಡದಿರಬೇಕು. ಸದಾ ನಮ್ಮ ಇಟ್ಟುಕೊಂಡ ಗುರಿಯನ್ನು ನೆನಪು ಮಾಡಿಕೊಳ್ಳುತ್ತಾ ಅದಕ್ಕೆ ಪೂರಕ ತಯಾರಿ ನಡೆಸಬೇಕು. ಅಲ್ಲದೆ ನಮ್ಮೊಳಗೆ ಇಟ್ಟುಕೊಂಡ ಗುರಿಯನ್ನು ಸದಾ ಪುನರ್ ಮನನ ಮಾಡಿ ನಿರಂತರ ಅಭ್ಯಾಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಅಧ್ಯಕ್ಷರಾದ ಶಾಂತಾರಾಮ್ ಭಂಡಾರ್ಕರ್ ಮಾತನಾಡಿ ಪ್ರಸ್ತುತದ ಮೊಬೈಲ್ ಮತ್ತು ದೂರದರ್ಶನ ಮನರಂಜನೆಯಿಂದಾಗಿ ಬದುಕಿಗೆ ಬೇಕಾದ ಆಧ್ಯಾತ್ಮಿಕ ಸಾಂಸ್ಕೃತಿಕ ಮೌಲ್ಯಗಳನ್ನು ಮರೆಯುತ್ತಿದ್ದೇವೆ. ಎಲ್ಲವನ್ನೂ ನಾಟಕೀಯ ರೀತಿಯಲ್ಲಿ ಪ್ರದರ್ಶಿಸುತ್ತಾರೆ. ಅದರ ಬದಲು ಸಂತೋಷ ಮತ್ತು ನೆಮ್ಮದಿಯ ಬದುಕಿಗಾಗಿ ಆಧ್ಯಾತ್ಮಿಕ ನೆಲೆಗಳ ಕುರಿತು ಯೋಚಿಸುವ ಅಗತ್ಯವಿದೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಲಾಯಿತು.

ಸಂಸ್ಥಾಪಕರ ದಿನಾಚರಣೆ ಅಂಗವಾಗಿ ನಡೆದ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾಲೇಜಿನ 1972ನೇ ಸಾಲಿನ ವಿದ್ಯಾರ್ಥಿಗಳಾದ ಕಿರಣ್ ಹಟ್ಟಿಯಂಗಡಿ ಮತ್ತು ಅವರ ಬ್ಯಾಚ್ ವಿದ್ಯಾರ್ಥಿಗಳು ದತ್ತಿನಿಧಿ ರೂಪದಲ್ಲಿ 4ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು, ರಾಜೇಂದ್ರ ತೋಳಾರ್, ಪ್ರಕಾಶ್ ಟಿ.ಸೋನ್ಸ್, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ಉಪಸ್ಥಿತರಿದ್ದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಿಶಾ ಎಂ ಸಂಸ್ಥಾಪಕರ ಕುರಿತು ಮಾತನಾಡಿದರು. ಕಂಪ್ಯೂಟರ್ ಉಪನ್ಯಾಸಕಿ ವಿಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಇಂಗ್ಲಿಷ್ ಉಪನ್ಯಾಸಕಿ ಶೈಲಾ ಪರಿಚಯಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಬಹುಮಾನ ವಿಜೇತರ ಪಟ್ಟಿ ಓದಿದರು.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!