spot_img
Wednesday, April 1, 2026
spot_img

ರೈತರ ʼದೆಹಲಿ ಚಲೋʼ ಪ್ರತಿಭಟನೆ | ಶಂಭು ಗಡಿಯಲ್ಲಿ ಬ್ಯಾರಿಕೇಡ್‌ ಹಾಕಿ ತಡೆ | ಅಶ್ರುವಾಯು ಪ್ರಯೋಗ

ಜನಪ್ರತಿನಿಧಿ (ನವ ದೆಹಲಿ) : ತಮ್ಮ ಬೇಡಿಕೆಗಳನ್ನು ಮುಂದಿರಿಸಿ ಈಡೇರಿಕೆಗೆ ಆಗ್ರಹಿಸಿ 101 ಮಂದಿ ಇರುವ ರೈತರ ಪ್ರತಿಭಟನಾ ಜಾಥ ಶಂಭು ಗಡಿಯಿಂದ ʼದೆಹಲಿ ಚಲೋʼ ಇಂದು(ಶುಕ್ರವಾರ) ಪ್ರಾರಂಭವಾಗಿದೆ.

ರೈತರ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದ ಸ್ಥಳದಿಂದ ಕೆಲವೇ ಮೀಟರ್ ಗಳಲ್ಲಿ ರೈತರನ್ನು ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದಿದ್ದಾರೆ. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ರೈತರು ತಲುಪುತ್ತಿದ್ದಂತೆಯೇ ಹರ್ಯಾಣ ಭದ್ರತಾ ಸಿಬ್ಬಂದಿಗಳು ಪ್ರತಿಭಟನಾನಿರತ ರೈತರ ವಿರುದ್ಧ ಅಶ್ರುವಾಯು ಪ್ರಯೋಗಿಸಿದ್ದಾರೆ.

ಹರಿಯಾಣ ಸರ್ಕಾರ ನಿಷೇಧಿತ ಆದೇಶಗಳನ್ನು ವಿಧಿಸಿದೆ ಮತ್ತು ಅಂಬಾಲಾ ಜಿಲ್ಲೆಯ 11 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಹಾಗೂ ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಿದೆ, ಮುಂದಿನ ವಾರದವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ

ಫೆಬ್ರವರಿಯಲ್ಲಿ ದೆಹಲಿ ತಲುಪಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತ ಗುಂಪು ಎರಡು ಪ್ರಯತ್ನಗಳನ್ನು ಭದ್ರತಾ ಪಡೆಗಳು ತಡೆದ ಬಳಿಕ ರಾಷ್ಟ್ರ ರಾಜಧಾನಿಯತ್ತ ಮೆರವಣಿಗೆಯನ್ನು ಪ್ರಾರಂಭಿಸುವ ಘೋಷಣೆ ಹೊರಬಿದ್ದಿತ್ತು.

ಅಂಬಾಲಾ-ದೆಹಲಿ ಗಡಿಯ ಹರಿಯಾಣ ಭಾಗದಲ್ಲಿ ಭದ್ರತಾ ಸಿಬ್ಬಂದಿಯ ಭಾರೀ ನಿಯೋಜನೆ ಮಾಡಲಾಗಿದೆ. ಅಂಬಾಲಾ ಜಿಲ್ಲಾಡಳಿತ ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 163 ರ ಅಡಿಯಲ್ಲಿ ಆದೇಶವನ್ನು ಹೊರಡಿಸಿದೆ. ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಯಾವುದೇ ಕಾನೂನುಬಾಹಿರ ಸಭೆಯನ್ನು ನಿರ್ಬಂಧಿಸಿದೆ.

ಅಂಬಾಲಾ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಇಂದು(ಶುಕ್ರವಾರ) ರಜೆ ಇರಲಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಅಂಬಲ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಂಭು ಗಡಿ ಬಿಂದು- ರಾಜಪುರ (ಪಂಜಾಬ್)-ಅಂಬಾಲ (ಹರಿಯಾಣ)– ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಬಹುಪದರದ ಬ್ಯಾರಿಕೇಡಿಂಗ್ ಈಗಾಗಲೇ ಜಾರಿಯಲ್ಲಿದೆ. ಶಂಭು ಗಡಿಯಲ್ಲೂ ಜಲಫಿರಂಗಿಗಳನ್ನು ನಿಯೋಜಿಸಲಾಗಿದೆ. ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್, 101 ರೈತರನ್ನು ‘ಮರ್ಜೀವರ್ ಗಳೆಂದು’ ಹೇಳಿದ್ದು, ಅವರು ಒಂದು ಕಾರಣಕ್ಕಾಗಿ ಸಾಯಲು ಸಿದ್ಧರಿದ್ದಾರೆ ಎಂದು ಎಚ್ಚರಿಸಿದ್ದಾರೆ.

https://x.com/PTI_News/status/1864941930599313515

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!