spot_img
Tuesday, March 17, 2026
spot_img

ಕಿರಿಮಂಜೇಶ್ವರ: ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಜನತಾ ಶನಯ’ ಶಾಲಾ ವಾರ್ಷಿಕೋತ್ಸವ

ಬೈಂದೂರು: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನತಾ ಶನಯ ಶಾಲಾ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ನೆರವೇರಿತು.

ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರದಲ್ಲಿ ಸಂಭ್ರಮದಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬಹುಮಾನ ವಿತರಣಾ ಸಮಾರಂಭ ಜನತಾ ಶನಯ ೨೦೨೪ ಬಹಳ ಅದ್ದೂರಿಯಾಗಿ ಎರಡು ದಿನಗಳ ಕಾಲ ಜರುಗಿತು.

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಸ್ಥೆಯ ಸರ್ವಾಂಗೀಣ ಸಾಧನೆಯ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಣೇಶ ಮೊಗವೀರರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶ್ರೇಷ್ಠವಾದ ಗುಣಮಟ್ಟದ ಶಿಕ್ಷಣವನ್ನು ನೀಡಿ ಗ್ರಾಮೀಣ ಪ್ರತಿಭೆಗಳು ರಾಜ್ಯ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಾಧನೆಯಿಂದ ಮಿನುಗುವಂತೆ ಮಾಡೋದು ಸಂಸ್ಥೆಯ ಗುರಿಯಾಗಿದೆ. ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ಬಗೆಯ ಸೌಲಭ್ಯಗಳನ್ನು ಒದಗಿಸಿ ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪತ್ತನ್ನಾಗಿಸುವುದು ನನ್ನ ಕನಸಾಗಿದೆ ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಇವರು ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಶುಭದಾ ಶಾಲೆಯ ವಿದ್ಯಾರ್ಥಿಗಳ ಸಾಧನೆ ಅನನ್ಯವಾದುದೆಂದು ಪ್ರಶಂಸೆ ವ್ಯಕ್ತಪಡಿಸಿದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಕುಮಾರಿ ದೀಪಿಕಾ ಆಚಾರ್ಯ ಸ್ವಾಗತಿಸಿ ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೇಖರ್ ಖಾರ್ವಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮುತ್ತು ಪುತ್ರನ್, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಸರಸ್ವತಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಶ್ಯಾಮಲಾ ಕುಂದರ್, ಶುಭದಾ ಎಜುಕೇಶನಲ್ ಟ್ರಸ್ಟ್ ಕಿರಿಮಂಜೇಶ್ವರ ಇದರ ಮಾಜಿ ಅಧ್ಯಕ್ಷರಾದ ಏನ್. ಕೆ. ಬಿಲ್ಲವ, ಶುಭದಾ ಬಿಲ್ಲವ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್, ವಾಗ್ಮಿ ಹಾಗೂ ಚಿಂತಕ ದಾಮೋದರ ಶರ್ಮ, ನಾಟಕ ಹಾಗೂ ಹಾಸ್ಯ ಕಲಾವಿದರುಗಳಾದ ಚೇತನ್ ನೈಲಾಡಿ, ಪ್ರಸಾದ್ ಜೋಗಿ, ನಾಗರಾಜ ತೆಕ್ಕಟ್ಟೆ ಮುಂತಾದವರು ಭಾಗವಹಿಸಿದ್ದರು.

ಸಾಧಕ ವಿದ್ಯಾರ್ಥಿಗಳಿಗೆ ಗೌರವಿಸಿ ಅಭಿನಂದಿಸಲಾಯಿತು. ವಾರ್ಷಿಕ ಸಂಭ್ರಮದ ಪ್ರಯುಕ್ತ ಆಯೋಜಿಸಿದ ಕ್ರೀಡೆ, ಸಾಂಸ್ಕೃತಿಕ/ ಸಾಹಿತ್ಯಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.

ಸಹ-ಶಿಕ್ಷಕಿ ದಿವ್ಯಸುವರ್ಣ ಸ್ವಾಗತಿಸಿ, ಶಿಕ್ಷಕಿ ಅನಿತಾ ರವರು ಕಾರ್ಯಕ್ರಮವನ್ನು ನಿರೂಪಿಸಿ ಶಿಕ್ಷಕ ರಾಘವೇಂದ್ರ ಡಿ ಹಾಗೂ ಶಾಂಭವಿ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಮನ ಸೂರೆಗೊಳ್ಳುವ ವಿವಿಧ ಮನರಂಜನಾ ಕಾರ್ಯಕ್ರಮಗಳು ವೇದಿಕೆಯ ಮೇಲೆ ಪ್ರಸ್ತುತಗೊಂಡವು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!