spot_img
Thursday, April 2, 2026
spot_img

ಹಟ್ಟಿಯಂಗಡಿ: ಸ್ನೇಹ ಜ್ಞಾನವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಉದ್ಘಾಟನೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ವಲಯದ ಕರ್ಕುಂಜೆ ಕಾರ್ಯಕ್ಷೇತ್ರದಲ್ಲಿ ಸ್ನೇಹ ಜ್ಞಾನ ವಿಕಾಸ ಕೇಂದ್ರದಲ್ಲಿ ಹೊಲಿಗೆ ತರಬೇತಿ ಉದ್ಘಾಟನೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಹಟ್ಟಿಯಂಗಡಿ ವಲಯದ ಮೇಲ್ವಿಚಾರಕರಾದ ಸುಬ್ರಹ್ಮಣ್ಯ ಹಾಗೂ ಶ್ರೀದೇವಿ ಸ್ವ ಸಹಾಯ ಸಂಘದ ಸದಸ್ಯರಾದ ಸರೋಜಾ ಹೊಲಿಗೆ ತರಬೇತಿ ಶಿಕ್ಷಕಿ ಯಾಸ್ಮಿನ್ ಕೇಂದ್ರದ ಸದಸ್ಯರಾದ ಗಿರಿಜಾ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ವಲಯದ ಮೇಲ್ವಿಚಾರಕ ಸುಬ್ರಹ್ಮಣ್ಯ ಅವರು ಮಾತನಾಡಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮವು ಗ್ರಾಮೀಣ ಮಟ್ಟದಲ್ಲಿ ಮಹಿಳೆಯರನ್ನು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡಿ ಆರ್ಥಿಕವಾಗಿ ಮೇಲ್ಮಟ್ಟಕ್ಕೆ ಬರುವಂತೆ ಮಾಡುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಸಾಗಿಸುತ್ತಿದ್ದಾರೆ ಎಂದರು.

ಹೊಲಿಗೆ ಶಿಕ್ಷಕಿ ಯಾಸ್ಮಿನ್ ಮಾತನಾಡಿ ಮಹಿಳೆಯರು ಹೊಲಿಗೆ ತರಬೇತಿ ಪಡೆಯುವುದರಿಂದ ಸ್ವತಂತ್ರವಾಗಿ ತಮ್ಮ ಬದುಕನ್ನು ಕಟ್ಟಿಕೊಳ್ಳಬಹುದು. ಜೊತೆಗೆ ಇದಕ್ಕೆ ಉನ್ನತ ವಿದ್ಯಾಭ್ಯಾಸ ಅವಶ್ಯಕತೆ ಇಲ್ಲ. ಸಾಮಾನ್ಯ ಜ್ಞಾನ ಇದ್ದರೆ ಸಾಕು. ಯಾರೂ ಬೇಕಾದರೂ ಇಂತಹ ಶಿಕ್ಷಣವನ್ನು ಪಡೆಯಬಹುದು ಆದರೆ ಎಲ್ಲದಕ್ಕಿಂತ ಹೆಚ್ಚಾಗಿ ಆಸಕ್ತಿ ಮತ್ತು ಮನಸ್ಸು ಬೇಕು ಎಂದು ಹೇಳಿದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು, ಸೇವಾಪ್ರತಿನಿಧಿ ಸುಚಿತ್ರ, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!