spot_img
Wednesday, April 1, 2026
spot_img

ಬಾಣಂತಿಯರ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ : ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಳಗಾವಿ) : ಜಿಲ್ಲಾಸ್ಪತ್ರೆ ಹಾಗೂ ಜಿಲ್ಲೆಯಲ್ಲಿ ಸಂಭವಿಸಿರುವ ಬಾಣಂತಿಯರು ಹಾಗೂ ನವಜಾತು ಶಿಶುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇಲ್ಲಿ, ವರದಿಗಾರರಿಗೆ ಸ್ಪಂದಿಸಿ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್‌, ಪ್ರಕರಣದ ಬಗ್ಗೆ ಈಗಾಗಲೇ ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಈ ಸಮಸೆ ಯಾಕೆ ಆಗಿದೆ ? ಸಾವು ತಡೆಯಲು ಯಾವ ಕ್ರಮಕೈಗೊಳ್ಳಬೇಕು? ಏನೆಲ್ಲ ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲೆಯಲ್ಲಿ ೫೪ ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಹೀಗಾಗಿ ಸಾವಿನ ಅಂಕಿಅಂಶ ಹೆಚ್ಚಾಗಿ ಕಾಣುತ್ತಿದೆ. ಉತ್ತರಕನ್ನಡವೂ ಸೇರದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ ಎಂದು ತಿಳಿಸಿದರು.

ಬಾಣಂತಿಯರು, ಹಸಿಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಬಳ್ಳಾರಿ ಪ್ರಕರಣಗಳಿಗೂ, ಆಸ್ಪತ್ರೆಗೂ ಸಂಬಂಧಿಲ್ಲ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್‌ ಬೇಬಿ ಹೀಗೆ ಅನೇಕ ಕಾರಣಗಳಿವೆ. ಒಂದು ಲಕ್ಷ ಮಕ್ಕಳು ಹುಟ್ಟಿದರೇ ೨೮ ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ ಆರನೇ ಅತ್ಯುತ್ತಮ ಆಸ್ಪತ್ರೆ ಎಂದು ಬೀಮ್ಸ್‌ ಪಾತ್ರವಾಗಿದೆ. ಬಾಣಂತಿಯರು, ಹಸಿಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!