spot_img
Sunday, May 17, 2026
spot_img

ಮಹಾಮೇಳವ್‌ : ಕರ್ನಾಟಕ : ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮುಖಂಡರ ಬಂಧನ !

ಜನಪ್ರತಿನಿಧಿ (ಬೆಳಗಾವಿ) : ಬೆಳಗಾವಿಯಲ್ಲಿ ಪ್ರತಿ ಬಾರಿ ಅಧಿವೇಶನ ನಡೆಯುವಾಗಲೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕ್ಯಾತೆ ತೆಗೆಯುವುದು ಸಾಮಾನ್ಯವಾಗಿದ್ದು, ಈ ಬಾರಿಯೂ ಸಂಭಾಜಿ ವೃತ್ತದ ಹತ್ತಿರ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಧಿವೇಶನಕ್ಕೆ ಒಂದು ದಿನ ಮುಂಚೆಯೇ ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ಗೊಂದಲಗಳು ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಮಹಾಮೇಳಾವಕ್ಕೆ ಬ್ರೇಕ್ ಹಾಕಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಳಗಾವಿ ನಗರ ಪೊಲೀಸ್ ಕಮೀಷನರ್ ಯಡಾ ಮಾರ್ಟಿನ್ ಅವರು ಈ ಭಾಗದಲ್ಲಿ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 9 ರಿಂದ 20 ವರೆಗೆ ನಾಲ್ಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿಯ ಟಿಳಕವಾಡಿ, ಕ್ಯಾಂಪ್, ಶಹಾಪೂರ, ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ವ್ಯಾಕ್ಸಿನ್ ಡಿಪೋ ಲೇಲೆ ಮೈದಾನ, ಧರ್ಮವೀರ ಸಂಭಾಜಿ ವೃತ್ತ, ಸಂಭಾಜಿ ಉದ್ಯಾನ ಹಾಗೂ ಶಿವಾಜಿ ಉದ್ಯಾನ ಭಾಗದಲ್ಲಿ ಮಹಾಮೇಳಾವ್ ನಡೆಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!