spot_img
Thursday, April 2, 2026
spot_img

ಉಪ ಚುನಾವಣೆ : ಮೂವರು ನೂತನ ಕಾಂಗ್ರೆಸ್‌ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ !

ಜನಪ್ರತಿನಿಧಿ (ಬೆಳಗಾವಿ) : ಇತ್ತೀಚೆಗೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಮೂವರು ಕಾಂಗ್ರೆಸ್ ಶಾಸಕರು ಇಂದು(ಸೋಮವಾರ) ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭವಾದ ಬೆನ್ನಲ್ಲೇ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣ ಮೂರು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ ಇ. ಅನ್ನಪೂರ್ಣ, ಯಾಸೀರ್ ಅಹಮದ್ ಖಾನ್ ಪಠಾಣ್ ಮತ್ತು ಸಿ. ಪಿ. ಯೋಗೇಶ್ವರ್ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ 13ರಂದು ನಡೆದ ಉಪಚುನಾವಣೆಯಲ್ಲಿ ಪತಿಯಿಂದ ತೆರವಾದ ಸ್ಥಾನಕ್ಕೆ ಬಳ್ಳಾರಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು. ಶಿಗ್ಗಾಂವ್‌ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಬಿಜೆಪಿಯ ಭರತ್ ಬೊಮ್ಮಾಯಿ ಅವರ ವಿರುದ್ಧ ಪಠಾಣ್ ಜಯ ಸಾಧಿಸಿದ್ದರು.

ಸಿ. ಪಿ ಯೋಗೇಶ್ವರ ಅವರು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಸಂಸದ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಈಗ ಸ್ಪೀಕರ್ ಹೊರತುಪಡಿಸಿ ಕಾಂಗ್ರೆಸ್‌ನ ಸಂಖ್ಯೆ 136 ಆಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!