spot_img
Thursday, April 2, 2026
spot_img

ಪಂಚಮಸಾಲಿ ಮೀಸಲಾತಿ : ಹಿಂದಿನ ಸರ್ಕಾರ ʼಸುಪ್ರೀಂʼಗೆ ಸಲ್ಲಿಸಿದ್ದ ಅಫಿಡವಿಟ್, ಕೋರ್ಟ್‌ ಆದೇಶವನ್ನು ನಾಳೆ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆ ಸಂಬಂಧಿಸಿದಂತೆ ಚಳಿಗಾಲ ಅಧಿವೇಶನದ ಮೊದಲನೇ ದಿನದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿರುವುದಾಗಿ ಹೇಳಿದರು.

ಹಿಂದಿನ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂಮರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನದ ಮುಂದೆ ಮಂಡಿಸುತ್ತೇನೆ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!