spot_img
Thursday, April 2, 2026
spot_img

ಚಳಿಗಾಲದ ಅಧಿವೇಶನ : ಅಕ್ರಮ ಪಡಿತರ ವಿರುದ್ಧ ವಿಶೇಷ ಕಾರ್ಯಾಚರಣೆ : ಕೆ.ಎಚ್.‌ ಮಿನಿಯಪ್ಪ

ಜನಪ್ರತಿನಿಧಿ (ಬೆಳಗಾವಿ) : ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ರಾಜ್ಯಾದ್ಯಂತ ಜನವರಿ – 2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಗೆ ₹13.51 ಕೋಟಿ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡುಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್‌ಐಆರ್ ದಾಖಲಿಸಿ ಒಟ್ಟು ₹2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್‌ಟಿ ಅಥವಾ ಸಿಎಸ್‌ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್‌ಐಸಿಯಿಂದ ಕೆಎಸ್‌ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯ ಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಅವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!