spot_img
Wednesday, April 1, 2026
spot_img

ಮಾಜಿ ಸಿಎಂ ಎಸ್.ಎಂ ಕೃಷ್ಣ ಅಸ್ತಂಗತ | ಸಿಎಂ ಸಿದ್ದರಾಮಯ್ಯ ಸಂತಾಪ | ನಾಳೆ ಬೆಳಗ್ಗೆ ಅಂತ್ಯಕ್ರಿಯೆ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಸಿಎಂ ಎಸ್.​ಎಂ.ಕೃಷ್ಣ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ಅವರು ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​.ಎಂ.ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು.
ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಎಸ್.ಎಂ.ಕೃಷ್ಣ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಡಾ.ಸತ್ಯನಾರಾಯಣ ಮೈಸೂರು ಮತ್ತು ಡಾ.ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡವು ಅವರಿಗೆ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಕರ್ನಾಟಕದ ಹತ್ತನೇ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿಬಾಯಿಸಿ ರಾಜಕಾರಣದಲ್ಲಿ ವಿಶೇಷ ಛಾಪು ಮೂಡಿಸಿದ್ದ ಎಸ್​​.ಎಂ.ಕೃಷ್ಣ ಬೆಂಗಳೂರಿನಲ್ಲಿ ಇಹಲೋಕ ತ್ಯಜಿಸಿಸಿದ್ದಾರೆ.
ಮಂಗಳವಾರ ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ(ಡಿಸೆಂಬರ್​ 11) ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕೃಷ್ಣರ ದೀರ್ಘಕಾಲದ ಒಡನಾಡಿ, ಸಂಬಂಧಿಯೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!