spot_img
Wednesday, April 1, 2026
spot_img

ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲು ಸೂಕ್ತ ಕ್ರಮ : ಕೆ. ಎಚ್. ಮುನಿಯಪ್ಪ

ಜನಪ್ರತಿನಿಧಿ (ಬೆಳಗಾವಿ) : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಪಡಿತರ ಕಾರ್ಡ್‌ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್‌ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್‌ಗಳಲ್ಲಿ ಶೇಕಡ 20 ರಷ್ಟು ಎಪಿಎಲ್ ಕಾರ್ಡ್‌ದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದನ್ನು ಅತೀ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ. ಅರ್ಹ ಬಿಪಿಎಲ್ ಕಾರ್ಡ್‌ಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದರೆ ಅಂಥವರಿಗೆ ಪುನಃ ಕಾರ್ಡ್‌ ದೊರಕಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!