spot_img
Sunday, February 15, 2026
spot_img

ಎಸ್. ಎಂ ಕೃಷ್ಣ ನಿಧನ : ನಾಳೆ ಸರ್ಕಾರಿ ರಜೆ ಘೋಷಣೆ | ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ಎಸ್ ಕೃಷ್ಣ ಅವರು ಅಸ್ತಂಗಗತರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಣೆ ಮಾಡಿದೆ.

ಶೋಕಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜನವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರ ಅಂತ್ಯಕ್ರಿಯೆಯನ್ನು ನಾಳೆ(ಬುಧವಾರ) ಅವರ ಹುಟ್ಟೂರು ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ ಎಂದೂ ತಿಳಿಸಿದೆ.

ಎಸ್ ಕೃಷ್ಣ ಅವರು ಸದಾಶಿವನಗರದಲ್ಲಿರುವ ತಮ್ಮ ಸ್ವಗೃದಲ್ಲಿ ಇಂದು(ಮಂಗಳವಾರ) ನಸುಕಿನ ಜಾವ ೨.೩೦ರವೇಳೆಗೆ ನಿಧನರಾದರು.

ನಾಳೆ ಸರ್ಕಾರಿ ರಜೆ :
ಎಸ್.‌ ಎಂ ಕೃಷ್ಣ ನಿಧನದ ಹಿನ್ನೆಲೆಯಲ್ಲಿ ನಾಳೆ ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗೆ (ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಣೆ ಮಾಡಲಾಗದೆ.

ಅಂತಿಮ ದರ್ಶನಕ್ಕೆ ಅವಕಾಶ :
ಸದಾಶಿವನಗರದಲ್ಲಿರುವ ಎಸ್ ಕೃಷ್ಣ ಅವರ ನಿವಾಸದಲ್ಲಿ ನಾಳೆ(ಬುಧವಾರ) ಬೆಳಗ್ಗೆ ೮ರವರೆಗೆ ಅಂತಿಮ ದರ್ಶನಕ್ಕೆ ಪಾರ್ಥೀವ ಶರೀರವನ್ನು ಇಡಲಾಗುವುದು, ಬಳಿಕ ಬೆಳಗ್ಗೆ ಗಂಟೆ ೧೦:೩೦ರ ಸುಮಾರಿಗೆ ಮದ್ದೂರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಎಸ್. ಎಂ ಕೃಷ್ಣರ ಅನುಗಾಲದ ಆಪ್ತ ಡಿಕೆಶಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!