spot_img
Sunday, February 15, 2026
spot_img

ಚಿತ್ತೂರು: ಕೃಷ್ಣಗಿರಿ ರಿಕ್ಷಾ ನಿಲ್ದಾಣ ಉದ್ಘಾಟನೆ

ಕುಂದಾಪುರ: ಮನುಷ್ಯ ಆರ್ಥಿಕವಾಗಿ ಶಕ್ತನಾದ ಸಂದರ್ಭದಲ್ಲಿ ಒಂದಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದಾಗ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದಂತಾಗುತ್ತದೆ ಎಂದು ವಂಡ್ಸೆ ಹರವರಿಯ ಜ್ಯೋತಿಷ್ಯರು ಹಾಗು ಪುರೋಹಿತರಾದ ದಿನಕರ ಉಡುಪ ಹೇಳಿದರು.

ಅವರು ಚಿತ್ತೂರಿನಲ್ಲಿ ಕೃಷ್ಣಗಿರಿ ರಿಕ್ಷಾ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಚಿತ್ತೂರು, ಆಲೂರು ಕ್ರಾಸ್ ಇಲ್ಲಿ ಕೃಷ್ಣಿ ಮತ್ತು ಗಿರಿಯ ಪೂಜಾರಿಯವರ ಸ್ಮರಣಾರ್ಥ ಅವರ ಮಕ್ಕಳು ಹಾಗೂ ಅಳಿಯ ನಿರ್ಮಿಸಿಕೊಟ್ಟ ಕೃಷ್ಣಗಿರಿ ರಿಕ್ಷಾ ನಿಲ್ದಾಣ ಲೋಕಾರ್ಪಣಾ ಕಾರ್ಯಕ್ರಮ ಶನಿವಾರ ನಡೆಯಿತು.

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಇದರ ವ್ಯವಸ್ಥಾಪಕ ಸಂಜೀವ ಪೂಜಾರಿ ಹಾಗೂ ಸುಮಿತ್ರಾ ಸಂಜೀವ ಪೂಜಾರಿ ದಂಪತಿಗಳು ರಿಕ್ಷಾ ನಿಲ್ದಾಣವನ್ನು ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಆಲೂರು ರಘುರಾಮ ದೇವಾಡಿಗ, ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ, ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅರ್ಚಕ ನಾಗರಾಜ ಮಂಜ, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಶೆಟ್ಟಿ, ಹಾಗೂ ರಿಕ್ಷಾ ಮಾಲಕ ಹಾಗು ಚಾಲಕರ ಸಂಘದ ಗೌರವಾಧ್ಯಕ್ಷ ಸುರೇಶ ಪೂಜಾರಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕೃಷ್ಣಿ ಹಾಗೂ ಗಿರಿಯ ಪೂಜಾರಿ ಕುಟುಂಬದ ಚಂದ್ರ ಪೂಜಾರಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಕುಂದಾಪುರ ಶಾಖಾ ಮ್ಯಾನೇಜರ್ ಹಿರಿಯಣ್ಣ ಪೂಜಾರಿ, ಹಾಗೂ ಸಂತೋಷ ಪೂಜಾರಿ , ಬಂಧುಗಳು, ಊರಿನ ಪ್ರಮುಖರು ಹಾಜರಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಲೈನ್‌ಮ್ಯಾನ್ ಉದಯ ಪೂಜಾರಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ರಿಕ್ಷಾ ನಿಲ್ದಾಣ ನಿರ್ಮಿಸಿಕೊಟ್ಟ ಕೃಷ್ಣಿ ಹಾಗೂ ಗಿರಿಯ ಪೂಜಾರಿ ಕುಟುಂಬಸ್ಥರ ಪರವಾಗಿ ಬಾಲಕೃಷ್ಣ ಪೂಜಾರಿಯವರನ್ನು ಸನ್ಮಾನಿಸಲಾಯಿತು.

ತೆಂಕೂರು ವನದುರ್ಗಾಪರಮೇಶ್ವರೀ ದೇವಸ್ಥಾನ ಆಡಳಿತ ಮೊಕ್ತೇಸರರಾದ ವಂಡಬಳ್ಳಿ ಜಯರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ. ಪೂಜಾರಿ ಸ್ವಾಗತಿಸಿದರು. ಉದಯ ಜಿ. ಪೂಜಾರಿ ವಂದಿಸಿದರು. ಪತ್ರಕರ್ತ ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!