spot_img
Wednesday, April 1, 2026
spot_img

ನಾಡಿನ ಹಲವು ಜನಪರ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರವರ್ತಕ ಎಸ್‌ಎಂಕೆ | ಕಾವೇರಿಯ ವರಪುತ್ರನನ್ನು ಈ ನಾಡು ಕಳೆದುಕೊಂಡಿದೆ : ಅನುಗಾಲದ ಆಪ್ತ ಡಿಕೆಶಿ ಭಾವುಕ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ಹಾಗೂ ʼಬ್ರ್ಯಾಂಡ್‌ ಬೆಂಗಳೂರುʼ ಪರಿಕಲ್ಪನೆಯ ಹರಿಕಾರ ಎಸ್‌.ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಹಾಗೂ ಎಸ್‌.ಎಂ ಕೃಷ್ಣರ ಅನುಗಾಲದ ಆಪ್ತ ಡಿ.ಕೆ ಶಿವಕುಮಾರ್‌ ಕಂಬನಿ ಮಿಡಿದಿದ್ದಾರೆ.

ನನ್ನ ರಾಜಕೀಯ ಬದುಕಿನ ಮಾರ್ಗದರ್ಶನಕ ಎಸ್‌.ಎಂ ಕೃಷ್ಣ ಅವರ ಅಗಲಿಕೆ ಅಪಾರ ನೋವು ತಂದಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಅವರು ಹೇಳಿದ್ದಾರೆ.

ಎಸ್.‌ ಎಂ. ಕೃಷ್ಣ ಅವರು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಮಾರ್ಪಡಿಸಿದವರು. ಬೆಂಗಳೂರನ್ನು ಸಿಲಿಕಾನ್‌ ಸಿಟಿ, ಐಟಿ ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ಡ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಸ್ಮರಿಸಿದ್ದಾರೆ.

ನಾಡಿನ ಹಲವು ಜನಪರ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರವರ್ತಕ. ಮೆಟ್ರೋ ರೈಲು, ದೇವನಹಳ್ಳಿ ವಿಮಾನ ನಿಲ್ದಾಣ ನಿರ್ಮಾಣದ ಹಿಂದಿನ ಶಕ್ತಿ. ಕೈಗಾರಿಕಾ ಹಾಗೂ ಕೃಷಿ ವಲಯಕ್ಕೆ ಸಮಾನ ಅವಕಾಶಗಳನ್ನು ನೀಡಿ ಅಭಿವೃದ್ಧಿಯಲ್ಲಿಯೂ ಸಮತೋಲನ ಕಾಯ್ದುಕೊಂಡ ಸಮಚಿತ್ತದ ಆಡಳಿತಗಾರ ಎಂದವರು ಹೊಗಳಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ವಿಚಾರ ಮುನ್ನೆಲೆಗೆ ಬಂದಾಗ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಎಲ್ಲಾ ಪಕ್ಷಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದರು. ಸದಾ ಅಭಿವೃದ್ಧಿ, ರಾಷ್ಟ್ರ ಹಾಗೂ ರಾಜ್ಯದ ಪರವಾಗಿ ಯೋಚನೆ ಮಾಡುತ್ತಿದ್ದ ಕಾಯಕ ಜೀವಿ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.

ಅವರ ರಾಜಕೀಯ ಉಚ್ಚ್ರಾಯ ಕಾಲದಲ್ಲಿ ಜೊತೆಯಾಗಿ ಇದ್ದವನು ನಾನು. ನನಗೆ ರಾಜಕೀಯ ಮಾರ್ಗದರ್ಶಕರಾಗಿ ಎಡವಿದಾಗ ಕೈ ಹಿಡಿಯುತ್ತಾ, ತಪ್ಪಿ ಮಾಡಿದಾಗಿ ತಿದ್ದುತ್ತಾ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುತ್ತಾ ಪ್ರೋತ್ಸಾಹ ನೀಡುತ್ತಿದ್ದ ರಾಜಕೀಯ ದಿಗ್ದರ್ಶಕ. ಅವರ ಆಲೋಚನೆಗಳು, ಚಿಂತನೆಗಳು ಹೊಸ ಜನಾಂಗಕ್ಕೆ, ಹಳೆ ತಲೆಮಾರಿನನ್ನು ಬೆಸೆಯುವ ಕೊಂಡಿಯಾಗಿದ್ದವು ಎಂದು ತಿಳಿಸಿದ್ದಾರೆ.

ಕಾವೇರಿ ನೀರು ವಿಚಾರದಲ್ಲಿ ಅಧಿಕಾರ ಹೋದರೂ ಚಿಂತೆಯಿಲ್ಲ ಎಂದು ನಾಡಿನ ಹಿತಕ್ಕಾಗಿ ಹೋರಾಟ ಮಾಡಿದವರು. ಕಾವೇರಿಯ ವರಪುತ್ರನನ್ನು ಈ ನಾಡು ಕಳೆದುಕೊಂಡಿದೆ ಎಂದಿದ್ದಾರೆ.

ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಬಂಧುಗಳು, ಅಭಿಮಾನಿಗಳು, ಸ್ನೇಹಿತರು, ಹಿತೈಷಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!