spot_img
Wednesday, April 1, 2026
spot_img

ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳ ಪುನರ್‌ ಪರಶೀಲನೆಗೆ ಪರಿಗಣನೆ : ಬೈರೇಗೌಡ

ಜನಪ್ರತಿನಿಧಿ (ಬೆಳಗಾವಿ) : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ಇನ್ನು, ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ. ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!