spot_img
Friday, December 13, 2024
spot_img

ಅಮೆರಿಕದ ಉದ್ಯಮಿ ಜಾರ್ಜ್ ಸೊರೋಸ್ ಜೊತೆಗೆ ಕಾಂಗ್ರೆಸ್ ನಂಟು | ಉಭಯ ಕಲಾಪಗಳಲ್ಲಿ ವಾಕ್ಸಮರ | ದಿನದ ಮಟ್ಟಿಗೆ ಕಲಾಪ ಮುಂದೂಡಿಕೆ

ಜನಪ್ರತಿನಿಧಿ (ನವದೆಹಲಿ) : ಉದ್ಯಮಿ ಅದಾನಿ ವಿವಾದ ಮತ್ತು ಅಮೆರಿಕದ ಉದ್ಯಮಿ ಜಾರ್ಜ್ ಸೊರೋಸ್ ಜೊತೆಗೆ ಕಾಂಗ್ರೆಸ್ ಸಂಪರ್ಕದ ಆರೋಪ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿಂದು ಆಡಳಿತ ಪಕ್ಷ ಮತ್ತು ವಿಪಕ್ಷ ಸದಸ್ಯರುಗಳ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಯಿತು. ಈ ಪರಿಣಾಮವಾಗಿ ಗದ್ದಲ,ಕೋಲಾಹಲ ಉಂಟಾಗಿ ಉಭಯ ಸದನಗಳ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡುವಂತಾಯಿತು.

ಲೋಕಸಭೆ ಕಲಾಪ ಪ್ರಾರಂಭವಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ, ಇತ್ತೀಚಿನ ದಿನಗಳಲ್ಲಿ ಸಂಸತ್ತಿನ ಕಲಾಪ ನುಂಗಿಹಾಕುತ್ತಿರುವ ಅಡೆತಡೆಗಳನ್ನು ಪ್ರಸ್ತಾಪಿಸಿದರು. ಸದನದ ಪಾವಿತ್ರ್ಯತೆ ಬಗ್ಗೆ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವ ಜನರ ಆಶಯ ಹಾಗೂ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಸದನದ ಘನತೆಯನ್ನು ಕಾಪಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಆದರೆ, ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ಸಂಸದರು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದರು, ಸ್ಪೀಕರ್ ಮೊದಲು ಮಧ್ಯಾಹ್ನದವರೆಗೂ ತದನಂತರ ದಿನದ ಮಟ್ಟಿಗೆ ಮುಂದೂಡಿದರು.

ರಾಜ್ಯಸಭೆಯಲ್ಲಿ ಆಡಳಿತಾರೂಢ ಎನ್ ಡಿಎ ಹಾಗೂ ಪ್ರತಿಪಕ್ಷದ ಸದಸ್ಯರು ಘೋಷಣೆ ಕೂಗುವ ಮೂಲಕ ತಮ್ಮ ಬೇಡಿಕೆಗಳನ್ನು ಆಲಿಸುವಂತೆ ಒತ್ತಾಯಿಸಿದರು. ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಿದ ಸಭಾಪತಿ ಜಗದೀಪ್ ಧಂಖರ್ ಅವರು ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯನ್ ಮಾತನಾಡಲು ಅವಕಾಶ ನೀಡಿದರು. ಆದಾಗ್ಯೂ, ಗದ್ದಲ, ವಾಕ್ಸಮರ ಮುಂದುವರೆದಿದ್ದರಿಂದ ಕಲಾಪವನ್ನು ನಾಳೆಗೆ(ಬುಧವಾರಕ್ಕೆ) ಮುಂದೂಡಿದರು.

ಬಿಜೆಪಿ ಸಂಸದರು ಸೋಮವಾರದಿಂದ ಜಾರ್ಜ್ ಸೊರೋಸ್ ಮತ್ತು ಕಾಂಗ್ರೆಸ್ ನಡುವಿನ ನಂಟಿನ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದು, ಇದು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಆರೋಪಿಸುತ್ತಿದ್ದರೆ, ಪ್ರತಿಪಕ್ಷಗಳು ಅದಾನಿ ವಿವಾದ ಮತ್ತು ಸಂಭಾಲ್ ಹಿಂಸಾಚಾರದಂತಹ ವಿಷಯಗಳ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿವೆ. ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಶುರುವಾದಾಗಿನಿಂದಲೂ ಆಗಾಗ್ಗೆ ಅಡ್ಡಿಯಾಗುತ್ತಲೇ ಇದ್ದು, ಕಲಾಪ ವ್ಯರ್ಥವಾಗುತ್ತಿದೆ. ಕಳೆದ ವಾರ ಎರಡು ದಿನ ಮಾತ್ರ ಸದನ ಸುಗಮವಾಗಿ ನಡೆದಿತ್ತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!