spot_img
Sunday, February 15, 2026
spot_img

ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ ಬಂದಿಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ವರದಿಗಾರರ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಇನ್ನು, ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!