spot_img
Thursday, December 12, 2024
spot_img

30ನೇ ವರ್ಷದ ಆಳ್ವಾಸ್ ವಿರಾಸತ್‌ ಗೆ ಅದ್ಧೂರಿಯ ಚಾಲನೆ| ವಿಶ್ವವನ್ನೇ ಹೃದಯದಲ್ಲಿ ತುಂಬುವ ’ವಿರಾಸತ್’: ಹೆಗ್ಗಡೆ

ವಿದ್ಯಾಗಿರಿ (ಮೂಡುಬಿದಿರೆ):ವಿಶ್ವವನ್ನೇ ಹೃದಯದಲ್ಲಿತುಂಬುವ ಹಬ್ಬವೇ ’ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ‌ಆನಂದ ಆಳ್ವ ಆವರಣದಲ್ಲಿ ಡಿ.೧೧ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ‌ಉತ್ಸವ ’30ನೇ ವರ್ಷದ ’ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು

ರಂಗಮಂದಿರದಲ್ಲಿ ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.

ಮುಸ್ಸಂಜೆಯಲ್ಲಿ ಪ್ರಕೃತಿರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ‌ಅವರು, ಇದು ಅವಿಭಜಿತದ ಕ್ಷಿಣಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು.

ಒಳ್ಳೆಯದನ್ನು ಒಪ್ಪಿಕೊಂಡು ಅಪ್ಪಿಕೊಳ್ಳಿ. ಆ ಹಾದಿಯಲ್ಲಿ ಸಮಾಜ, ದೇಶ ಬೆಳೆಯಬೇಕು. ನಾವೂ ಪ್ರಕೃತಿಯನ್ನು, ಹೃದಯವನ್ನು ಅರಳಿಸಬೇಕು ಎಂದರು.

ಆಳ್ವಾಸ್ ಕೃಷಿ ಮೇಳ ಕಂಡು ನೀವೂ ಸಣ್ಣಕೈತೋಟ ಮಾಡಿ. ಮಣ್ಣು, ಪರಿಸರ ಪ್ರೀತಿಸಿ ಎಂದು ಸಲಹೆ ನೀಡಿದರು.
ಪಂಚೇಂದ್ರೀಯಗಳಿಗೆ ಉಣಬಡಿಸುವ. ಡಾ.ಮೋಹನ ಆಳ್ವ ಅವರದ್ದು, ಹೃದಯ ವೈಶಾಲ್ಯದ ವ್ಯಕ್ತಿತ್ವ. ಇಂತಹ ವ್ಯಕ್ತಿತ್ವ ನಾಡಿನಾದ್ಯಂತ ಹೆಚ್ಚಲಿ ಎಂದರು.

ಸಮಾರಂಭದ‌ಅಧ್ಯಕ್ಷತೆ ವಹಿಸಿದ ಎಂ.ಜಿ.ಆರ್. ಗ್ರೂಪ್‌ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಆಳ್ವರ ದೃಷ್ಟಿಯೇ ಕ್ರಿಯೆಯಾಗಿ ಇಲ್ಲಿರೂಪುಗೊಂಡಿದೆ ಎಂದರು.

ನಾನು ಅವರನ್ನು ನಾಲ್ಕು ದಶಕಗಳಿಂದ ಕಂಡಿದ್ದೇನೆ. ಅವರ ಪ್ರಯೋಗ‌ಇಂದು ನಾಡಿಗೆ ಕೊಡುಗೆ ನೀಡಿದೆ ಎಂದರು.
ಆಳ್ವಾಸ್ ಆವರಣವು ಚಂದ ಮಾಮದ ಅಮರಾವತಿ ಹಾಗೂ ಇಂದ್ರ ನಗರಿಯ ನೆನಪಿಸುತ್ತದೆ. ಹೊಸ ಲೋಕವೇ ಇಲ್ಲಿ ಸೃಷ್ಟಿಯಾಗಿದೆ‌ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಅಂದು‌ಊರಿಗೆ ಸೀಮಿತವಾಗಿದ್ದ ವಿರಾಸತ್‌ಇಂದುರಾಷ್ಟ್ರೀಯ ಹಬ್ಬವಾಗಿದೆ. ಇಂದು ದೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ೫೨ ಕೋಟಿ ಇದೆ. ಯುವ ಸಂಪತ್ತು ಬಗ್ಗೆ ನಾವು ಯೋಚಿಸಬೇಕು‌ಎಂದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಕ್ರೀಡೆ, ಸಾಂಸ್ಕೃತಿಕ ತರಬೇತಿ ನೀಡುತ್ತಿದ್ದೇವೆ. ಮಂಗಳೂರು ವಿಶ್ವವಿದ್ಯಾನಿಲಯದ ೪೯ ಅಥ್ಲೆಟಿಕ್ಸ್‌ದಾಖಲೆ ಆಳ್ವಾಸ್ ಹೆಸರಿನಲ್ಲಿದೆ ಎಂದು ಸಂತಸ ಹಂಚಿಕೊಂಡರು.

ನಮ್ಮ ಸಂಸ್ಥೆಯಲ್ಲಿ ಪ್ರತಿವರ್ಷ ೪೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ತರಬೇತಿ ಪಡೆದು, ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ ಎಂದರು.

ವಿರಾಸತ್ ಅನ್ನು ಸಮಗ್ರವಾಗಿ ರೂಪಿಸಲಾಗಿದ್ದು, ಪಂಚೇಂದ್ರಿಯಗಳಿಗೆ ಜ್ಞಾನ ನೀಡುವಕಾರ್ಯಕ್ರಮವಾಗಿದೆ. ಯುವಕರು, ಹಿರಿಯರು, ವೃದ್ಧರೆಲ್ಲರಿಗೂ ವಿರಾಸತ್ ಮುದ ನೀಡಲಿದೆ‌ಎಂದರು.

ಆರಂಭದಲ್ಲಿ ಗಿರಿಧರ್ ಅವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಮೂಡಿದ ಬೆಳಕಾಗಿ ಬಾ ಹಾಗೂಡಾ.ಎನ್.ಕೆ. ಪದ್ಮನಾಭ ವಿರಚಿv ಪರಹಿತಬಯಸೋ ಪ್ರಾರ್ಥನೆಯನ್ನು ಹಾಡಲಾಯಿತು.

ಆಳ್ವಾಸ್ ವಿರಾಸತ್ ೩೦ನೇ ವರ್ಷದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಹೊರ ತಂದಿರು ಆಳ್ವಾಸ್‌ ಸಾಂಸ್ಕೃತಿಕ ವೈಭವ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.

ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್‌ಆಯುಕ್ತ‌ಅನುಪಮ್‌ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್‌ಗೈಡ್ಸ್‌ಕರ್ನಾಟಕರಾಜ್ಯ ಪ್ರಧಾನ‌ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್‌ ಕಾರ್ಯನಿರ್ವಾಹಕ ನಿರ್ದೇಶಕಕಿಶೋರ್ ಆಳ್ವ, ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ‌ ಅಸ್ರಣ್ಣ, ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎಲ್.ಎನ್. ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ,, ಬಳ್ಳಾರಿ ಕುಮಾರಸ್ವಾಮಿ ಮಿನರಲ್‌ ಎಕ್ಸ್ ಪೋರ್ಟ್‌ನ ಎಂ.ರವೀಂದ್ರನಾಥ ಆಳ್ವ, ಕಲ್ಕೂರ ಪ್ರತಿಷ್ಠಾನದ‌ ಅಧ್ಯಕ್ಷ ಪ್ರದೀಪ್‌ ಕಲ್ಕೂರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ‌ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, , ಪುತ್ತಿಗೆಗ್ರಾಮ ಪಂಚಾಯಿತಿ‌ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಕೆನರಾ ಬ್ಯಾಂಕಿನ ಸುಧಾಕರ್‌ ಕೊಠಾರಿ, ಪ್ರಮುಖವಾದ ಜಯಶ್ರೀ ಅಮರನಾಥ ಶೆಟ್ಟಿ, ಹರಿಕೃಷ್ಣ ಪುನರೂರು, ಭುವನಾಭಿರಾಮ‌ ಉಡುಪ, ತಿಮ್ಮಯ್ಯ ಶೆಟ್ಟಿ, ರಾಮಯ್ಯ ಶೆಟ್ಟಿ, ಪತ್ರಕರ್ತ ಶ್ರೀನಿವಾಸ ಇಂದಾಜೆ, ಮೂಡುಬಿದಿರೆ ಚೌಟರ‌ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್‌ ಇನ್‌ ಫ್ರಾಟೆಕ್‌ನ ಮುಸ್ತಾಫ‌ಎಸ್.ಎಂ, ಮೂಡುಬಿದಿರೆ ಬಿಮಲ್‌ ಕನ್‌ಸ್ಟ್ರಕ್ಷನ್ ನ ಪ್ರವೀಣ್‌ಕುಮಾರ್ ಉಪಸ್ಥಿತರಿದ್ದರು.

ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿಕಾರ್ಯಕ್ರಮ ನಿರೂಪಿಸಿದರು.

ಮೇಳಗಳು:
ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು‌ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳೂ ಮಂಗಳವಾರ ಬೆಳಿಗ್ಗೆ ಉದ್ಘಾಟನೆಗೊಂಡಿದ್ದು, ಡಿ.15ರ ವರೆಗೆ ನಡೆಯಲಿವೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!