spot_img
Thursday, December 12, 2024
spot_img

KAS ಮತ್ತೆ ಮುಂದೂಡಿಕೆ | ಮಾರ್ಚ್ ಅಂತ್ಯಕ್ಕೆ ಮುಖ್ಯ ಪರೀಕ್ಷೆ ನಡೆಸಲು ನಿರ್ಧಾರ !

ಜನಪ್ರತಿನಿಧಿ (ಬೆಂಗಳೂರು) : 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಡಿ.29ರಂದು ಪೂರ್ವಭಾವಿ ಪರೀಕ್ಷೆಯನ್ನು ಮತ್ತೆ ನಡೆಸಲು ಈಗಾಗಲೇ ನಿರ್ಧರಿಸಿರುವ ಕೆಪಿಎಸ್‌ಸಿ, 2025ರ ಮಾರ್ಚ್28, 29, ಏಪ್ರಿಲ್ 1 ಮತ್ತು 2ರಂದು ಮುಖ್ಯ ಪರಿಕ್ಷೆ ನಡೆಸಲು ದಿನ ನಿಗದಿಪಡಿಸಿದೆ.

ಈ ಬಗ್ಗೆ ಕೆಪಿಎಸ್‌ಸಿ ಕಾರ್ಯದರ್ಶಿ ರಮಣದೀಪ್‌ ಚೌಧರಿ ಅವರು ಪ್ರಕಟಣೆ ಹೊರಡಿಸಿದ್ದಾರೆ. ಆದರೆ, ಅಧಿಸೂಚನೆಯನ್ನು ಇನ್ನಷ್ಟೆ ಹೊರಡಿಸಬೇಕಿದೆ.

ಈ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಆಗಸ್ಟ್ 27ರಂದು ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಆದರೆ, ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಭಾಷಾಂತರಿಸಿದ ಪ್ರಶ್ನೆ- ಉತ್ತರಗಳಲ್ಲಿ ತಪ್ಪುಗಳು ಕಾಣಿಸಿಕೊಂಡ ಕಾರಣಕ್ಕೆ ಡಿ. 29ಕ್ಕೆ ಮರು ಪರೀಕ್ಷೆ ನಿಗದಿಯಾಗಿದೆ.

ಮರು ಪರೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿ ಧಾರವಾಡ ಮತ್ತು ಬೆಂಗಳೂರು ಹೈಕೋರ್ಟ್‌ ಪೀಠದಲ್ಲಿ ವಿಚಾರಣಾ ಹಂತದಲ್ಲಿದೆ. ಈ ನಡುವೆಯೇ ಮುಖ್ಯ ಪರೀಕ್ಷೆಗೆ ಕೆಪಿಎಸ್‌ಸಿ ದಿನ ನಿಗದಿಪಡಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!