spot_img
Wednesday, April 1, 2026
spot_img

ಮುಡಾ ಹಗರಣ : ಲೋಕಾಯುಕ್ತ ನಡೆಸಿದ ಈವರೆಗಿನ ತನಿಖಾ ವರದಿ ಹೈಕೋರ್ಟ್‌ಗೆ ಸಲ್ಲಿಕೆ | ಡಿಸೆಂಬರ್ 19ಕ್ಕೆ ವಿಚಾರಣೆ

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 50:50 ನಿವೇಶನ ಹಂಚಿಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಡಿಸೆಂಬರ್ 9ರವರೆಗೆ ನಡೆದಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

ಹೈಕೋರ್ಟ್‌ನ ಹಿಂದಿನ ಆದೇಶದಂತೆ ಲೋಕಾಯುಕ್ತ ಪೊಲೀಸರು ಡಿಸೆಂಬರ್‌ 10ರವರೆಗಿನ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದರು. ವರದಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಅಧಿಕೃತವಾಗಿ ಸ್ವೀಕಾರ ಮಾಡಿತು.

ಈ ಸಂದರ್ಭದಲ್ಲಿ ವಾದ ಮಂಡಿಸಿದ ಸ್ನೇಹಮಯಿ ಕೃಷ್ಣ ಪರ ವಕೀಲರು, ಮುಡಾ ಹಗರಣದ ಆರೋಪಿ ಸಿಎಂ ಸಿದ್ದರಾಮಯ್ಯ ಆಗಿದ್ದಾರೆ. ಅವರೇ ರಾಜ್ಯದ ಮುಖ್ಯಸ್ಥರಾಗಿದ್ದು, ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲದ ಸಿಬಿಐ ಅಥವಾ ಬೇರೆ ಸ್ವತಂತ್ರ ಸಂಸ್ಥೆಗೆ ತನಿಖೆ ವಹಿಸಲು‌ ಕೋರಿದರು.  ಮಾತ್ರವಲ್ಲದೆ, ಪ್ರಕರಣದ ಎಲ್ಲ ಮಾಹಿತಿ ನ್ಯಾಯಪೀಠಕ್ಕೆ ಗೊತ್ತಿದೆ.‌ ಹೀಗಾಗಿ ತನಿಖೆ ವಿಶ್ವಾಸಾರ್ಹವಾಗಲು ಸ್ವತಂತ್ರ ತನಿಖೆ ಅಗತ್ಯವೆಂದು ಅವರು ಹೇಳಿದರು.

ಪ್ರಕರಣದ ತನಿಖೆ ಸಿಬಿಐಗೆ ಕೋರಿ ಸಲ್ಲಿಕೆ ಮಾಡಿರುವ ಅರ್ಜಿಯ ವಿಚಾರಣೆ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ, ಲೋಕಾಯುಕ್ತ ಪೊಲೀಸರು ಅಂತಿಮ‌ ವರದಿ ಸಲ್ಲಿಸದಂತೆ ಸೂಚನೆ ನೀಡಬೇಕು ಎಂದು ಕೋರಿದರು. ಅಷ್ಟಲ್ಲದೆ, ಜಾರಿ ನಿರ್ದೇಶನಾಲಯ( ಇ.ಡಿ)ವನ್ನು ಪ್ರತಿವಾದಿಯನ್ನಾಗಿಸಲು ಕೋರಿ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದರು.

ಈ ಸಂದರ್ಭದಲ್ಲಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡಲು ಪ್ರತಿವಾದಿಗಳಿಗೆ ಸೂಚನೆ ನೀಡಿದ ಹೈಕೋರ್ಟ್ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿ ಆದೇಶಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!