spot_img
Sunday, February 15, 2026
spot_img

Photos | ಎಸ್‌ಎಂಕೆ ಪಾರ್ಥೀವ ಶರೀರದ ಅಂತಿಮ ಯಾತ್ರೆ | ರಸ್ತೆ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ ಜನ | ಮಧ್ಯಾಹ್ನ 3ಕ್ಕೆ ಅಂತ್ಯ ಸಂಸ್ಕಾರ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನ ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಿಂದ ಮದ್ದೂರಿಗೆ ತೆರಳುವ ಸಂದರ್ಭದಲ್ಲಿ ರಾಮನಗರದಲ್ಲಿ ಅಪಾರ ಸಂಖ್ಯೆಯ ಜನರು ಅಂತಿಮ ದರ್ಶನ ಪಡೆದರು. ರಸ್ತೆ ಇಕ್ಕೆಲಗಳಲ್ಲಿ ಭಾರಿ ಸಂಖ್ಯೆಯ ಜನ ಎಸ್‌ಎಂಕೆ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

ಯಾತ್ರೆಯಲ್ಲಿ ಸರ್ಕಾರದ ವತಿಯಿಂದ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಕುಟುಂಬಸ್ಥರು, ಆಪ್ತರು ಜೊತೆಗಿದ್ದರು.

ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸ್ವಗ್ರಾಮವಾಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಒಕ್ಕಲಿಗ ಸಂಪ್ರದಾಯದಂತೆ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ವಿಧಿವಿಧಾನಗಳು ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ರಾಮನಗರ ಜಿಲ್ಲೆಯಲ್ಲಿ ಎಸ್‌ ಎಂ ಕೆ ಅಂತಿಮ ಯಾತ್ರೆ
ತೆರೆದ ವಾಹನದಲ್ಲಿ ಎಸ್‌.ಎಂ ಕೃಷ್ಣರ ಪಾರ್ಥೀವ ಶರೀರದ ಅಂತಿಮ ಯಾತ್ರೆ
ಹುಟ್ಟೂರಿನತ್ತ ಎಸ್‌ಎಂಕೆ ಶವ ಯಾತ್ರೆ.
ಗಾಜಿನ ವಾಹನದಲ್ಲಿ ಬೆಂಗಳೂರಿನಿಂದ ಸೋಮನಹಳ್ಳಿಯೆಡೆಗೆ ಹೊರಟ ಎಸ್‌ಎಂಕೆ ಅಂತಿಮ ಯಾತ್ರೆ.
ಪಾರ್ಥೀವ ಶರೀರದ ದರ್ಶನ ಪಡೆದ ಜನ ಸಮೂಹ.
ಎಸ್‌.ಎಂ.ಕೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಕಿಕ್ಕಿರಿದು ಸೇರಿದ ಜನ ಸಮೂಹ.
ರಾಮನಗರ ಜಿಲ್ಲೆಯಲ್ಲಿ ರಸ್ತೆ ಇಕ್ಕೆಲಗಳಲ್ಲಿ ಅಂತಿಮ ದರ್ಶನಕ್ಕೆ ಕಾದು ನಿಂತ ಜನ ಸಮೂಹ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!