spot_img
Wednesday, December 11, 2024
spot_img

ಜಗದೀಪ್‌ ಧನ್‌ಕರ್‌ ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷಗಳ ಆಗ್ರಹ | ತೀವ್ರ ಗದ್ದಲ | ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಜನಪ್ರತಿನಿಧಿ (ನವ ದೆಹಲಿ) : ಸಭಾಪತಿ ಜಗದೀಪ್‌ ಧನ್‌ಕರ್‌ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಬಗ್ಗೆ ವಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ನಾಳೆ(ಗುರುವಾರ)ಗೆ ಮುಂದೂಡಲಾಗಿದೆ.

ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ ವಿರುದ್ಧ ಘೋಷಣೆ ಕೂಗಿದರು. ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆಗೆ ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು.

ಇದಕ್ಕೆ ಸಭಾಪತಿಗಳು ಒಪ್ಪದೆ, ಪಟ್ಟಿ ಮಾಡಲಾದ ವಿಷಯಗಳ ಬಗ್ಗೆ ಚರ್ಚೆಗೆ ಅನುಮತಿ ನೀಡಿದರು. ಇದಕ್ಕೆ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗದ್ದಲವನ್ನುಂಟು ಮಾಡಿತು. ನಂತರ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದರೂ ವಿಪಕ್ಷಗಳು ಗದ್ದಲವನ್ನು ಮುಂದುವರೆಸಿದವು. ಹೀಗಾಗಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ವಿಪಕ್ಷಗಳ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ಪಕ್ಷಪಾತ ಹಾಗೂ ವಿಪಕ್ಷಗಳ ನಾಯಕರು ಮಾತನಾಡಲು ನೀಡುವ ಸಮಯದ ವಿಷಯದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ನಿನ್ನೆ(ಮಂಗಳವಾರ) ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿವೆ.

ಸೋಮವಾರ ನಡೆದ ಕಲಾಪದಲ್ಲಿ ಸಭಾಪತಿ ನಡೆದುಕೊಂಡ ರೀತಿಗೆ ಆಕ್ಷೇಪಿಸಿದ್ದ ವಿಪಕ್ಷ ನಾಯಕರು, ಪ್ರಸಕ್ತ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಸಭಾಪತಿ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಪತ್ರಕ್ಕೆ 70 ಸಂಸದರು ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ(ಎಂ), ಜೆಎಂಎಂ, ಎಎಪಿ, ಡಿಎಂಕೆ, ಮತ್ತು ಸಮಾಜವಾದಿ ಪಕ್ಷ ಸೇರಿ 60ಕ್ಕೂ ಹೆಚ್ಚು ವಿಪಕ್ಷದ ಸಂಸದರು ಸಹಿ ಹಾಕಿದ್ದು, ಸಹಿ ಹಾಕಿದ ನೋಟಿಸ್ ಅನ್ನು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗಳಿಗೆ ವಿಪಕ್ಷಗಳ ಪರವಾಗಿ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ನಾಸೀರ್ ಹುಸೇನ್ ಅವರು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!