spot_img
Wednesday, December 11, 2024
spot_img

ʼಬ್ರ್ಯಾಂಡ್‌ ಬೆಂಗಳೂರುʼ ಪರಿಕಲ್ಪನೆಯ ಹರಿಕಾರ ಎಸ್‌ಎಂಕೆ ಪಂಚಭೂತಗಳಲ್ಲಿ ಲೀನ | ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ

ಜನಪ್ರತಿನಿಧಿ (ಸೋಮನಹಳ್ಳಿ/ಬೆಂಗಳೂರು) : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಸ್ವಂತ ಗ್ರಾಮ ಮದ್ದೂರಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು(ಬುಧವಾರ) ನಡೆಯಿತು.

ಕುಶಾಲು ತೋಪು ಹಾರಿಸುವ ಮೂಲಕ ಪೊಲೀಸರು, ಎಸ್.ಎಂ.ಕೃಷ್ಣ ಅವರಿಗೆ ಗೌರವ ನಮನ ಸಲ್ಲಿಸಿದರು. ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯ ಸಂಸ್ಕಾರ ನಡೆಯಿತು.

ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಬುಧವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪಡೆದುಕೊಂಡರು.

ಅಗಲಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಡಿಸಿಎಂ ಹಾಗೂ ಎಸ್‌ಎಂಕೆ ಅವರ ಅನುಗಾಲದ ಆಪ್ತ, ರಾಜಕೀಯ ಕ್ಷೇತ್ರದ ಶಿಷ್ಯ ಡಿ. ಕೆ ಶಿವಕುಮಾರ್‌ ನೇತೃತ್ವದಲ್ಲಿ, ಶ್ರೀರಂಗಪಟ್ಟಣದ ಭಾನುಪ್ರಕಾಶ್‌ ಶರ್ಮಾ ಅವರ ಆಚಾರ್ಯತ್ವದಲ್ಲಿ ಅಂತ್ಯಕ್ರಿಯೆ ವಿಧಿವಿಧಾನಗಳು ನಡೆದವು. ಅಂತ್ಯ ಸಂಸ್ಕಾರಕ್ಕೆ ಒಂದು ಸಾವಿರ ಕೆ.ಜಿ ಶ್ರೀಗಂಧದ ಕಟ್ಟಿಗೆ ಬಳಸಲಾಯಿತು.

ಕಾಫಿ ಡೇ ಮಾಲಿಕ ದಿವಂಗತ ಸಿದ್ಧಾರ್ಥ್‌ ಅವರ ಪುತ್ರ ಹಾಗೂ ಎಸ್.‌ ಎಂ ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿ ಸ್ಪರ್ಶಿಸುವುದರ ಮೂಲಕ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು. ಹುಟ್ಟೂರು ಸೋಮನಹಳ್ಳಿಯಲ್ಲಿ ನೀರವ ಮೌನ ಆವರಿಸಿತ್ತು. ಕುಟುಂಬಸ್ಥರು ಸೇರಿ ಅಪಾರ ಸಂಖ್ಯೆಯಲ್ಲಿ ಬಂಧುಗಳು, ಅಭಿಮಾನಿಗಳು ಸೇರಿದ್ದರು. ಎಸ್‌. ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!