spot_img
Thursday, December 12, 2024
spot_img

ಹಿಂದೂಸ್ತಾನಿ ಗಾಯಕ ಪಂಡಿತ್‌ ವೆಂಕಟೇಶ ಕುಮಾರ್‌ ಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ

ಜನಪ್ರತಿನಿಧಿ (ವಿದ್ಯಾಗಿರಿ/ಮೂಡುಬಿದಿರೆ) : ಆಳ್ವಾಸ್‌ ಕಾಲೇಜಿನ ಭವ್ಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂಟಪದಲ್ಲಿ ಹಿಂದೂಸ್ತಾನಿ ಗಾಯಕ ಪಂಡಿತ್ ವೆಂಕಟೇಶ ಕುಮಾರ್ ಅವರಿಗೆ ‘ಆಳ್ವಾಸ್ ವಿರಾಸತ್-2024’ ಪ್ರಶಸ್ತಿ ಪ್ರದಾನ ಮಾಡಲಾಯಿತು.

30ನೇ ವರ್ಷದ ಆಳ್ವಾಸ್ ವಿರಾಸತ್‌ನ ಎರಡನೇ ದಿನವಾದ ಬುಧವಾರ, ಸಂಗೀತದಾರತಿ, ಪುಷ್ಪವೃಷ್ಟಿಯೊಂದಿಗೆ ₹1 ಲಕ್ಷ ನಗದು ನೀಡಿ ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ ಕುಮಾರ ಅವರನ್ನು ‘ಆಳ್ವಾಸ್ ವಿರಾಸತ್-2024′ ಪ್ರಶಸ್ತಿಯನ್ನು ನೀಡಿ  ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕಾ ಮಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೆಂಕಟೇಶ ಕುಮಾರ, “ಅಂಧರು, ದುರ್ಬಲರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕನ್ನು ಮುಡಿಪಾಗಿಟ್ಟಿದ್ದರು ಪಂಡಿತ ಪುಟ್ಟರಾಜ ಗವಾಯಿಗಳು. ನನ್ನಂತಹ ಅನೇಕ ಬಡ ವಿದ್ಯಾರ್ಥಿಗಳಿಗೆ ಆಶ್ರಮದಲ್ಲಿ ಆಸರೆ ನೀಡಿ, ಬೆಳೆಸಿದ್ದಾರೆ. ನನಗೆ ಲಭಿಸಿದ ಪ್ರಶಸ್ತಿಯನ್ನು ಗುರುಗಳಿಗೆ ಅರ್ಪಣೆ ಮಾಡುತ್ತೇನೆ’ ಎಂದು ಭಾವುಕರಾದರು.

ಪುಟ್ಟರಾಜ ಗವಾಯಿಗಳು ರಾಜ್ಯದಲ್ಲಿ ಹಿಂದೂಸ್ತಾನಿ ಸಂಗೀತ ಪಸರಿಸಲು ಕಾರಣರಾದವರು. ‘ಪ್ರಶಸ್ತಿ ಹುಡುಕಿಕೊಂಡು ಬರಬೇಕು, ನಾವು ಅದರ ಹಿಂದೆ ಹೋಗಬಾರದು’ ಎಂಬ ಗುರುಗಳ ಮಾತು ಇಂದಿನ ಪ್ರಶಸ್ತಿಯ ಮೂಲಕ ಸಾರ್ಥಕವಾಗಿದೆ ಎಂದರು.

ಕಾರ್ಯಕ್ರಮ ಸಂಘಟಿಸಲು ಅಧಿಕಾರ, ಹಣ ಇದ್ದರೆ ಸಾಲದು. ಶಿಸ್ತು, ಸಂಯಮ, ಸಮಯ ಪ್ರಜ್ಞೆ ಹಾಗೂ ಶ್ರಮ ಮುಖ್ಯ. ಡಾ.ಎಂ. ಮೋಹನ ಆಳ್ವ ಅದನ್ನು ಸಾಧಿಸಿ ತೋರಿಸಿದ್ದಾರೆ ಎಂದು ಶ್ಲಾಘಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಬೆಂಗಳೂರಿನ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಕರ್ಣ ಬೆಳಗೆರೆ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕ್ಯಾ.ಗಣೇಶ್ ಕಾರ್ಣಿಕ್, ಪಿ.ಜಿ.ಆ‌ರ್. ಸಿಂಧ್ಯಾ, ನರೇಂದ್ರ ಎಲ್. ನಾಯಕ್, ಶ್ರೀಪತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!