spot_img
Thursday, December 12, 2024
spot_img

ಎಸ್.‌ ಎಂ. ಕೃಷ್ಣರಿಗೆ ಮರಣೋತ್ತರ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡಿ ಗೌರವಿಸುವಂತೆ ಮುಖ್ಯಮಂತ್ರಿಗಳಿಗೆ ಆರ್‌. ಅಶೋಕ್‌ ಮನವಿ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಎಂದು ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಮೈಕ್ರೋ ಬ್ಲಾಗಿಂಗ್ ಎಕ್ಸ್‌ ಖಾತೆಯ ಮೂಲಕ ಪೋಸ್ಟ್ ಮಾಡಿರುವ ಅಶೋಕ್, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ ಎಂದಿದ್ದಾರೆ.

ಅಷ್ಟಲ್ಲದೇ, ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ ಎಂದವರು ಹೇಳಿದ್ದಾರೆ.

ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕ ರತ್ನ ಎಸ್.ಎಂ.ಕೃಷ್ಣ : ಆರ್‌ ಅಶೋಕ್‌

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!