spot_img
Thursday, December 12, 2024
spot_img

ಲಾಠಿ ಚಾರ್ಚ್‌ ಮಾಡಿಸಿದ್ದು ಪಂಚಮಶಾಲಿ ಶಾಸಕನೇ : ಸಚಿವ ಸ್ಥಾನಕ್ಕಾಗಿ ಕುಮ್ಮಕ್ಕು | ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಜನಪ್ರತಿನಿಧಿ (ಬೆಳಗಾವಿ) :‌ ಪೊಲೀಸರಿಗೆ ಕುಮ್ಮಕ್ಕು ನೀಡಿ ಲಾಠಿ ಚಾರ್ಜ್ ಮಾಡಿಸಿದ್ದು ಪಂಚಮಸಾಲಿ ಸಮಾಜದವನೇ ಆದ ಒಬ್ಬ ಶಾಸಕರು. ʼಇದಕ್ಕೆ ಸುವರ್ಣ ವಿಧಾನಸೌಧದ ಒಳಗಿನ ಸಿಸಿಟಿವಿ ಕ್ಯಾಮರೆಗಳೇ ಸಾಕ್ಷಿʼ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃಂತ್ಯುಜಯ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಲಾಠಿಚಾರ್ಜ್‌ ಖಂಡಿಸಿ ಇಲ್ಲಿನ ಸುವರ್ಣ ವಿಧಾನಸೌದದ ಬಳಿಕ ರಾಷ್ಟ್ರೀಯ ಹೆದ್ದಾರಿ ಮೇಲೆ ಗುರುವಾರ ಕೂಡ ಬಂದ್‌ ಮಾಡಿದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ನಮ್ಮ ಸಮಾಜದ ಶಾಸಕರೊಬ್ಬರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಅವರು ಯಾರೆಂದು ನಾನು ಹೆಸರು ಹೇಳುವುದಿಲ್ಲ. ಅಂಥವರ ಹೆಸರು ಹೇಳಿ ನನ್ನ ನಾಲಿಗೆಯನ್ನು ಹೊಲಸು ಮಾಡಿಕೊಳ್ಳುವುದಿಲ್ಲ ಎಂದೂ ಆಕ್ರೋಶ ಹೊರಹಾಕಿದರು.

ಬಸವಣ್ಣನ ಕಾಲದಲ್ಲಿ ಕೊಂಡಿ ಮಂಚಣ್ಣನಂಥವರು ಇದ್ದರು. ರಾಣಿ ಚೆನ್ನಮ್ಮನ ಕಾಲದಲ್ಲಿ ಮಲ್ಲಪ್ಪಶೆಟ್ಟಿ ಅಂಥವರು ಇದ್ದರು. ನಮ್ಮ ಕಾಲದಲ್ಲೂ ನಮ್ಮದೇ ಸಮಾಜದಲ್ಲಿ ಅಂಥವರು ಇದ್ದಾರೆ ಎಂದರು.

ತಮಗೆ ಸಚಿವ ಸ್ಥಾನ ಸಿಗಬೇಕು ಎಂಬ ಉದ್ದೇಶದಿಂದಲೇ ಆ ಶಾಸಕ ಸಮಾಜದ ವಿರುದ್ಧವೇ ಕುಮ್ಮಕ್ಕು ನಡೆಸಿದ್ದಾರೆ. ಅವರು ಲಾಠಿಚಾರ್ಜ್‌ ಮಾಡಿಸಲಿ, ಗೋಲಿಬಾರ್‌ ಮಾಡಿಸಲಿ. ತಾವು ಸಚಿವ ಸ್ಥಾನ ಪಡೆದು ಆರಾಮವಾಗಿರಲಿ. ಎಲ್ಲವನ್ನು ಸಹಿಸಿಕೊಳ್ಳುವ ಶಕ್ತಿ ನಮಗಿದೆ. ಸಮಾಜದಲ್ಲಿ ಒಬ್ಬ ಮಲ್ಲಪ್ಪಶೆಟ್ಟಿ ಇದ್ದರೆ ಏನಾಯಿತು. ೧ ಕೋಟಿ ೨೯ ಲ್ಷ ೯೯,೯೯೯ ಮಂದಿ ಕ್ರಾಂತಿಕಾರಿಗಳು ಇದ್ದಾರೆ ಎಂದೂ ಅವರು ಹೇಳಿದರು.

ಹೆದ್ದಾರಿ ಮೇಲೆ ರಕ್ತ ಚೆಲ್ಲುವಂತೆ ಹೊಡೆಸಿದ್ದೀರಿ. ಆ ರಕ್ತದ ಕಣಕಣಕ್ಕೂ ಬೆಲೆ ಕಟ್ಟಬೇಕಾಗುತ್ತದೆ ಎಂದು ಹೇಳಿದರು.

ನೇತೃತ್ವ ವಹಿಸಿದ್ದ ಮಹಿಳಾ ನಾಯಕಿ, ಶಾಸಕ ಬಾಬಾಸಾಹೇಬ ಪಾಟೀಲ್‌ ಅವರ ಪತ್ನಿ ರೋಹಿಣಿ ಮಾತನಾಡಿ, ಮುಗ್ದರ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಜೆಗಳಿಗೆ ಆಯ್ಕೆಯಾದ ಸಿದ್ದರಾಮಯ್ಯ ಅವರು ಪ್ರಜೆಗಳನ್ನೇ ಮರೆತಿದ್ದಾರೆ. ಕಿಂಚಿತ್ತಾದರೂ ಕನಿಕರ ಇದ್ದರೆ ೨ಎ ಮೀಸಲಾತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!