spot_img
Sunday, February 15, 2026
spot_img

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ !

ಜನಪ್ರತಿನಿಧಿ (ನವ ದೆಹಲಿ) : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಇಂದು(ಗುರುವಾರ) ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸದ್ಯ, ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಒಂದು ರಾಷ್ಟ್ರ, ಒಂದು ಚುನಾವಣೆ ಉದ್ದೇಶವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ವರದಿ ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ ಮಾಡಬಹುದೆಂಬ ಶಿಫಾರಸ್ಸನ್ನು ಸಮಿತಿ ನೀಡಿತ್ತು.

ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂಗೀಕರಿಸಿದ ವಾರಗಳ ನಂತರ ಈ ಬೆಳವಣಿಗೆ ನಡೆದಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಹಂತಹಂತವಾಗಿ ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!