spot_img
Thursday, December 12, 2024
spot_img

ಪಿಡಿಒ ಹುದ್ದೆಗಳ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ, ಪರಿಶೀಲನೆಗೆ 3 ಸದಸ್ಯರ ಉಪ ಸಮಿತಿ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ರಾಯಚೂರಿನ ಸಿಂಧನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!