spot_img
Wednesday, April 1, 2026
spot_img

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಕೆ. ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿಎಂ ಪ್ರತಿಕ್ರಿಯಿಸಿದರು.

ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸಿರುವ ಸಾಲಮಿತಿಗೆ ಒಳಪಟ್ಟಿದೆ.

ರಾಜ್ಯ ಸರ್ಕಾರವು ರಾಜಸ್ವ ಹಾಗೂ ಬಂಡವಾಳ ಸ್ವೀಕೃತಿಗಳಿಂದ ಮತ್ತು ಕೇಂದ್ರ ಸರ್ಕಾರ ನಿಗದಿಪಡಿಸುವ ಮಿತಿಯೊಳಗೆ ಸಾಲವನ್ನು ಪಡೆಯುವ ಮೂಲಕ ಆಯವ್ಯಯದಲ್ಲಿ ಅಂದಾಜಿಸಿರುವ ವೆಚ್ಚವನ್ನು ಭರಿಸುತ್ತದೆ. ಈ ಸ್ವೀಕೃತಿಗಳನ್ನು ಮೀರಿ ಈವರೆಗೂ ಯಾವುದೇ ವೆಚ್ಚದ ಹೊರೆ ರಾಜ್ಯ ಸರ್ಕಾರಕ್ಕೆ ಉಂಟಾಗಿರುವುದಿಲ್ಲ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಕುಂಠಿತವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿದ್ದು. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!