spot_img
Thursday, December 12, 2024
spot_img

ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ. ಬಿಟ್ಟು ಉಳಿದದ್ದು ರಾಜ್ಯದ ಅಭಿವೃದ್ಧಿಗೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಪ್ರಸಕ್ತ ಸಾಲಿನ ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ ರೂ.ಗಳನ್ನು ಕಲ್ಯಾಣ ಕಾರ್ಯಗಳಿಗಾಗಿ ವಿನಿಯೋಗಿಸಲಾಗುತ್ತಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ. 1 ಲಕ್ಷದ 4 ಸಾವಿರ ಕೋಟಿ ರೂ. ಸಾಲ ಮಾಡಿದರೂ ಕೂಡ ಮಾನದಂಡ ಮೀರಿಲ್ಲ. ಶೇ.25 ರ ಒಳಗಡೆಯೇ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಕೆ. ಎ. ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಸಿಎಂ ಪ್ರತಿಕ್ರಿಯಿಸಿದರು.

ಯಾವುದೇ ಸರ್ಕಾರ ತನ್ನ ಖರ್ಚುಗಳನ್ನು ಮಾಡಬೇಕಾದರೆ ಸಾಲವನ್ನು ಮಾಡಬೇಕಾಗುತ್ತದೆ. ನಮ್ಮ ಇತಿಮಿತಿಗಳನ್ನು ಪರಿಶೀಲಿಸಿ ಸಾಲ ಮಾಡಲಾಗುತ್ತದೆ. ಒಟ್ಟು ಸಾಲ ಶೇ.25ರ ವರೆಗೂ ಮೀರಬಾರದು ಎಂಬ ಮಾನದಂಡಗಳಿದ್ದು, ನಮ್ಮ ಸರ್ಕಾರದ ಸಾಲ ಮಿತಿಯ ಒಳಗಡೆ ಇದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ, ನಮ್ಮ ರಾಜ್ಯದ ಸಾಲ ಕಡಿಮೆ ಇದೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂ.ಗಳನ್ನು ನೀಡಲಾಗಿದೆ. ಉಳಿದ ಹಣವನ್ನು ಅಭಿವೃದ್ಧಿಗೆ ನೀಡಲಾಗುತ್ತಿದೆ.‌ ವಿರೋಧ ಪಕ್ಷದವರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದರಲ್ಲಿ ಯಾವುದೇ ಹುರುಳಿಲ್ಲ ಎಂದರು.

2017-18 ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ ₹36 ಸಾವಿರ ಕೋಟಿ ಹಣವನ್ನು ವ್ಯಯಿಸಲಾಗಿದೆ. ಈ ವರ್ಷ ₹39,272 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದಲ್ಲಿ ಮಾತ್ರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಈ ಕಾಯ್ದೆಯನ್ನು ಏಕೆ ಜಾರಿ ಮಾಡಿಲ್ಲ? ಕೇಂದ್ರ ಸರ್ಕಾರ ಏಕೆ ಈ ಕಾಯ್ದೆಯನ್ನು ಮಾಡಿಲ್ಲ? ಎಂದವರು ಪ್ರಶ್ನಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!