spot_img
Thursday, April 2, 2026
spot_img

ಕುಂದಾಪುರ ತಾ. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ | ಗ್ಯಾರಂಟಿ ಯೋಜನೆಯ ಬಗ್ಗೆ ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರ : ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರ ತಾಲೂಕಿನ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ 18ನೇ ತಿಂಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಅಧ್ಯಕ್ಷತೆಯಲ್ಲಿ ಗ್ಯಾರೆಂಟಿ‌ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಕುಂದಾಪುರ ತಾಲೂಕಿನಲ್ಲಿ 18  ತಿಂಗಳಲ್ಲಿ ಶಕ್ತಿ ಯೋಜನೆಯಡಿ ನವೆಂಬರ್‌ವರೆಗೆ ಒಟ್ಟು 10450334  ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಒಟ್ಟು 360498364 ರೂ. ಮೊತ್ತ ಈ ಯೋಜನೆಗಾಗಿ ಒಳಕೆಯಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ಶಂಕರನಾರಾಯಣ ಘಟಕದಲ್ಲಿ ನವೆಂಬರ್‌ ತನಕ ಒಟ್ಟು 18508  ಫಲಾನುಭವಿಗಳು 1440827552 ರೂ. ಲಾಭ ಪಡೆದಿರುತ್ತಾರೆ. ತಲ್ಲೂರು ಘಟಕದಲ್ಲಿ ನವೆಂಬರ್‌ ವರೆಗೆ 27000 ಫಲಾನುಭವಿಗಳಿಗೆ 200039302 ರೂ. ಲಾಭ ಪಡೆದಿದ್ದಾರೆ. ಕುಂದಾಪುರ ಘಟಕದಲ್ಲಿ ನವೆಂಬರ್‌ ವರೆಗೆ 25241 ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯಡಿ 283466550 ರೂ.ಗಳನ್ನು ವ್ಯಯಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ 50571 ಫಲಾನುಭವಿಗಳ ಖಾತೆಗೆ ನೇರವಾಗಿ 136,74,44,000 ರೂಪಾಯಿ ಜಮೆಯಾಗಿರುತ್ತದೆ. ಕುಂದಾಪುರ ತಾಲೂಕಿನಲ್ಲಿ 724 ಕೊರಗ ಕುಟುಂಬಗಳಿವೆ. 598 ಕುಟುಂಬಗಳ ಯಜಮಾನಿಯರಿಗೆ ಯೋಜನೆಯ ಲಾಭ ಪಡೆದಿದ್ದಾರೆ. 21 ಕುಟುಂಬದ ಯಜಮಾನಿಯರಿಗೆ ಬೇರೆ ಬೇರೆ ತಾಂತ್ರಿಕ ಕಾರಣಗಳಿಂದ ಪಾವತಿ ಆಗಿಲ್ಲ ಎಂದು ಇಲಾಖೆಯ ಮುಖ್ಯಸ್ಥರು ತಿಳಿಸಿದರು. ಅನ್ನಭಾಗ್ಯ ಯೋಜನೆಯಡಿ ಆಗಸ್ಟ್‌ ವರೆಗೆ  203496 ಪಡಿತರ ಚೀಟಿಗಳಿಗೆ 34068000 ರೂಪಾಯಿ ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗಿರುತ್ತದೆ. ಕಳೆದ ವರ್ಷ ಡಿಸೆಂಬರ್‌ ನಿಂದ ಈವರ್ಷದ ನವೆಂಬರ್‌ ವರೆಗೆ ಯುವನಿಧಿ ಯೋಜನೆಯಡಿ 665 ಫಲಾನುಭವಿಗಳಿಗೆ ಒಟ್ಟು 5025000 ರೂಪಾಯಿ ನೇರವಾಗಿ ಖಾತೆಗೆ ಜಮೆ ಆಗಿರುತ್ತದೆ.

ಸಭೆಯಲ್ಲಿ ಸರ್ಕಾರಿ ಬಸ್ಸುಗಳನ್ನು ನಿಗದಿತ ಸಮಯದಲ್ಲಿ ಪರವಾನಿಗೆ ಇರುವ ರೂಟ್ ಗಳಿಗೆ ಬಸ್ಸನ್ನು ಓಡಿಸಬೇಕು ಮತ್ತು ಚಾಲಕ ನಿರ್ವಾಹಕರು ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸದಸ್ಯರು ಆಗ್ರಹಿಸಿದರು. ಗೃಹಲಕ್ಷ್ಮಿ ಯೋಜನೆಯಡಿ NPCI, ಆಧಾರ್ ಸೀಡ್ ಮ್ಯಾಪಿಂಗ್ ಆಗಿರದ ಫಲಾನುಭವಿಗಳನ್ನು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಂಪರ್ಕಿಸಿ ಮುಂದಿನ ಸಭೆಯೊಳಗೆ ಅವರಿಗೆ ಯೋಜನೆಯ ಲಾಭ ದೊರಕಿಸಿಕೊಡಬೇಕೆಂದು ಅಧ್ಯಕ್ಷರು ಸೂಚಿಸಿದರು. ಯುವನಿಧಿ ಯೋಜನೆಯ ನೋಂದಣಿ ಕಡಿಮೆ ಇರುವುದರಿಂದ ಈ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರ ಮಾಡಬೇಕೆಂದು ಸೂಚಿಸಿದರು. ಯಾರೂ ಯೋಜನೆಗಳಿಂದ ವಂಚಿತರಾಗಬಾರದು. ತಾಂತ್ರಿಕ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವಂತೆ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ವಿವಿಧ ಇಲಾಖೆಯ ಮುಖ್ಯಸ್ಥರು ಹಾಜರಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ : ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರ : ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ

ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 18 ತಿಂಗಳಿಂದ ಐದು ಪಂಚ ಗ್ಯಾರಂಟಿ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸುತ್ತಿದ್ದರೂ ಪತ್ರಿಕೆಗಳಲ್ಲಿ ತಪ್ಪು ಮಾಹಿತಿಯೊಂದಿಗೆ ವರದಿಗಳು ಆಗುತ್ತಿರುವುದು ಬೇಸರದ ಸಂಗತಿ. ಸಣ್ಣ ಪುಟ್ಟ ತಾಂತ್ರಿಕ ಸಂಸ್ಯೆಗಳನ್ನು ಹೊರತುಪಡಿಸಿದರೆ ಕುಂದಾಪುರ ತಾಲೂಕೊಂದರಲ್ಲೆ ಈ ಮಟ್ಟಿಗೆ ಯಶಸ್ವಿಯಾಗಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ಅನುಷ್ಠಾನವಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನವೂ ಆಗುತ್ತಿಲ್ಲ, ಅಭಿವೃದ್ಧಿ ಕಾರ್ಯವೂ ಆಗುತ್ತಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರವಾದದ್ದು. ಐದೂ ಯೋಜನೆಗಳಲ್ಲಿ ಇರುವ ಸಮಸ್ಯೆಗಳ ಬಗ್ಗೆ ಯೋಜನೆಯ ಅನುಷ್ಠಾನ ಸಮಿತಿ ಮುರುವರ್ಜಿ ವಹಿಸಿ ಶೀಘ್ರದಲ್ಲೇ ಪರಿಹರಿಸಲು ಪ್ರಯತ್ನಿಸುತ್ತೇವೆ ಎಂದು ಸಮಿತಿಯ ಅಧ್ಯಕ್ಷ ಹೆಚ್.‌ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!