spot_img
Monday, February 16, 2026
spot_img

ರಾಜ್ಯದಲ್ಲಿ ಡಿಜಿಟಲ್‌ ವಂಚನೆ ಪ್ರಕರಣ ತಡೆಗೆ ಕ್ರಮ : ಪರಮೇಶ್ವರ್

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರಾಜ್ಯಾದ್ಯಂತ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಈಗಾಗಲೇ ದಾಖಲಾಗಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಫೋಕ್ಸೋ ಪ್ರಕರಣಗಳು ಆದಷ್ಟು ಬೇಗ ಇತ್ಯರ್ಥವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ಇನ್ನು, ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಬಗ್ಗೆ  ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲಾ ರೀತಿಯ ಅವಕಾಶಗಳನ್ನು ನೀಡಲಾಗಿತ್ತು.ಆದರೆ ಪ್ರತಿಭಟನಾಕಾರರು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಆದೇಶಗಳನ್ನು ಉಲ್ಲಂಘಿಸಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರಣ ಲಘು ಲಾಠಿ ಪ್ರಹಾರ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!