spot_img
Thursday, April 2, 2026
spot_img

ರಾಜ್ಯಸಭೆ ಸಭಾಪತಿ ಪದಚ್ಯುತಿಗೆ ವಿಪಕ್ಷಗಳ ಪಟ್ಟು | ಉಭಯ ಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿ | ಕಲಾಪ ಮುಂದೂಡಿಕೆ

ಜನಪ್ರತಿನಿಧಿ (ನವ ದೆಹಲಿ) : ರಾಜ್ಯಸಭೆ ಸಭಾಪತಿ ಜಗದೀಪ್ ಧಂಖರ್ ವಿರುದ್ಧದ ಅವಿಶ್ವಾಸ ನಿರ್ಣಯದ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ವಾಗ್ವಾದದ ನಂತರ ರಾಜ್ಯಸಭೆ ಕಲಾಪವನ್ನು ಡಿಸೆಂಬರ್ 16 ಕ್ಕೆ ಮುಂದೂಡಿಕೆ ಮಾಡಲಾಯಿತು.

ಇಂದು(ಶುಕ್ರವಾರ) ಬೆಳಗ್ಗೆ ಸದನ ಕಲಾಪಕ್ಕೆ ಸೇರುತ್ತಿದ್ದಂತೆ ಪ್ರತಿಪಕ್ಷ ಸದಸ್ಯರು ಪ್ರಸ್ತಾವನೆಯ ಮೇಲೆ ಚರ್ಚೆಗೆ ಒತ್ತಾಯಿಸಿದರು. ಸದನದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಆಡಳಿತ ಪಕ್ಷ ಸದಸ್ಯರು ಆಕ್ಷೇಪ ಎತ್ತಿದರು. ಈ ಸಂದರ್ಭದಲ್ಲಿ ತೀವ್ರ ಗದ್ದಲ, ಕೋಲಾಹಲ ಸೃಷ್ಟಿಯಾದ ಕಾರಣ ಸಭಾಪತಿಗಳು ಕಲಾಪ ಮುಂದೂಡಿದರು.

‘ಅತ್ಯಂತ ಪಕ್ಷಪಾತಿ’ ಎಂದು ಆರೋಪಿಸಿ ರಾಜ್ಯಸಭಾಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಅವಿಶ್ವಾಸ ನಿರ್ಣಯದ ನೋಟಿಸ್ ನ್ನು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮಂಡಿಸಿದವು.

ಗದ್ದಲದ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಧಂಖರ್ ಅವಕಾಶ ನೀಡಿದರು. ಆಡಳಿತ ಪಕ್ಷದ ಸದಸ್ಯರಿಗೆ ಮಾತನಾಡಲು ಹೆಚ್ಚಿನ ಸಮಯಾವಕಾಶ ನೀಡುವ ಮೂಲಕ ಸಭಾಪತಿಗಳು ಒಲವು ತೋರುತ್ತಿದ್ದಾರೆ, ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಗೌರವ ತೋರಿಸುತ್ತಿದ್ದಾರೆ ಎಂದು ಖರ್ಗೆ ಗಂಭೀರವಾಗಿ ಆರೋಪ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಧಂಖರ್ ಅವರು ಖರ್ಗೆ ಮತ್ತು ಸಭಾನಾಯಕ ಜೆಪಿ ನಡ್ಡಾ ಅವರನ್ನು ಅಧ್ಯಕ್ಷರ ಚೇಂಬರ್‌ನಲ್ಲಿ ಬಿಕ್ಕಟ್ಟನ್ನು ಪರಿಹರಿಸುವ ಪ್ರಯತ್ನದಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನಿಸಿ ಕಲಾಪವನ್ನು ಡಿಸೆಂಬರ್ 16 ಕ್ಕೆ ಮುಂದೂಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!