spot_img
Monday, February 16, 2026
spot_img

ಪಂಚಮಸಾಲಿ ಮೀಸಲಾತಿ : ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು ? : ಸಿಎಂ

ಜನಪ್ರತಿನಿಧಿ (ವಿಜಯಪುರ) : ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯಪುರದಲ್ಲಿ ವರದಿಗಾರರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ, ಎಲ್ಲರಿಗೂ ಕಾನೂನು ಒಂದೇ. ನನಗೂ, ಸ್ವಾಮೀಜಿಗೂ ಎಲ್ಲರಿಗೂ ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಕಾನೂನು ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದರು.

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿ ಸಮುದಾಯದ ಜನರ ಮೇಲೆ ಪೊಲೀಸರು ಕಲ್ಲು ಹೊಡೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ವಾಸ್ತವವಾಗಿ ಬಿಜೆಪಿಗರು ಕಲ್ಲು ಹೊಡೆದಿರುವುದು, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗುವುದರ ಫೋಟೋಗಳನ್ನು ತೋರಿಸುತ್ತೇವೆ. ಸ್ವಾಮೀಜಿಗಳು ರಸ್ತೆಯಲ್ಲಿ ಏಕೆ ಕುಳಿತುಕೊಂಡಿದ್ದಾರೆ? ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ನಾನು ಹೇಳಿರುವುದಕ್ಕೆ ಸಾಕ್ಷಿಯಿದೆ.

ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ  ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು. 2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು ಎಂದು ಹೇಳಿದರು.

ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಿದ್ದೆವು ಎಂದವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!