spot_img
Wednesday, April 1, 2026
spot_img

ನ್ಯಾಯಾಂಗ ವ್ಯವಸ್ಥೆ ಸದೃಢವಾಗಿದ್ದಿದ್ದರೆ ಇಷ್ಟೊತ್ತಿಗೆ ಮೋದಿ, ಯೋಗಿ ಜೈಲಿನಲ್ಲಿರುತ್ತಿದ್ದರು : ಪುರಿ ಶ್ರೀ ಹೇಳಿಕೆ | ʼನಿರ್ಭೀತ ಜಗದ್ಗುರು : ಬಿಜೆಪಿ ನಾಯಕ ಸ್ವಾಮಿ

ಜನಪ್ರತಿನಿಧಿ (ನವ ದೆಹಲಿ) : ಪ್ರಧಾನಿ ನರೇಂದ್ರ ಮೋದಿ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಸ್ವಾಮೀಜಿ ಈಗ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾಗಿದ ನಂತರ ವರದಿಗಾರರರಿಗೆ ಸ್ಪಂದಿಸಿ ಮಾತನಾಡಿರುವ ಅವರು, ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ, ಇಷ್ಟೊತ್ತಿಗಾಗಲೇ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜೈಲಿನಲ್ಲಿರುತ್ತಿದ್ದರು ಎಂದು ಹೇಳುವುದರ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ.

ಇದೇ ಸಂದರ್ಭದಲ್ಲಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಪುರಿ ಶಂಕರಾಚಾರ್ಯ ಹೇಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಪುರಿಗೆ ತೆರಳಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರ ಆಶೀರ್ವಾದ ಪಡೆದಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

ಇನ್ನು ನಿಶ್ಚಲಾನಂದ ಸರಸ್ವತಿ ಅವರ ಈ ಹೇಳಿಕೆಗಳ ವರದಿಗಳನ್ನು ಉಲ್ಲೇಖಿಸಿ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ, ʼನಿರ್ಭೀತ ಜಗದ್ಗುರುʼ ಎಂದು ನಿಶ್ಚಲಾನಂದ ಸರಸ್ವತಿ ಅವರನ್ನು ಪ್ರಶಂಸಿಸಿದ್ದಾರೆ.

The fearless Jagatguru : Subramanian Swamy

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!