spot_img
Wednesday, April 1, 2026
spot_img

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು: ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ

ಜನಪ್ರತಿನಿಧಿ (ಉಡುಪಿ/ನವದೆಹಲಿ) : ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ ಮಾಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು 15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣ ದಲ್ಲಿ ಮುಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ ಇದ್ದು ಆರೋಗ್ಯ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಬಡ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಅಗತ್ಯವಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾದರೆ ತಜ್ಞ ವೈದ್ಯರ ನೇಮಕ ನಡೆಯಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಅವರ ಸೇವೆ ಲಭ್ಯವಾಗಲಿದೆ. ಮತ್ತು ಉಡುಪಿ ಜನತೆಯ ಉತ್ತಮವಾದ ಆರೋಗ್ಯ ಸೇವೆಗಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತವಾದ ಸರಕಾರಿ ವೈದ್ಯಕೀಯ ಕಾಲೇಜ್ ಮಂಜೂರು ಮಾಡಬೇಕೆಂದು ಆರೋಗ್ಯ ಸಚಿವರಾದ ಜೆ ಪಿ ನಡ್ಡಾ ಅವರಲ್ಲಿ ವಿನಂತಿಸಿಕೊಂಡಿದ್ದಾರೆ.

ಸಂಸದರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಆರೋಗ್ಯ ಸಚಿವರಾದ ಜೆ ಪಿ ನಡ್ಡಾ ಅವರು ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜ್ ನೀಡುವುದರ ಬಗ್ಗೆ ಪರಿಶೀಲನೆ ಮಾಡುವುದಾಗಿ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!