spot_img
Wednesday, April 1, 2026
spot_img

ಕೆಂಪು ಕಲ್ಲು ತೆಗೆಯಲು ಅನುಮತಿ ನೀಡುವಂತೆ ಗಣಿ, ಭೂ ವಿಜ್ಞಾನ ಇಲಾಖೆಯ ಸಚಿವರಿಗೆ ಉಡುಪಿ ಶಾಸಕರಿಂದ ಮನವಿ

ಜನಪ್ರತಿನಿಧಿ (ಉಡುಪಿ/ಬೆಳಗಾವಿ) : ಬೆಳಗಾವಿಯ ಸುವರ್ಣ ಸೌಧದಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ ಸ್ಥಗಿತವಾದ ಹಿನ್ನೆಲೆಯಲ್ಲಿ ಆಗುತ್ತಿರುವ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತಂದರು.

ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ ಕ್ವಾರಿ ಮಾಲೀಕರು, ಲಾರಿ ಮಾಲೀಕರು, ರೈತರು ಹಾಗೂ ಕೂಲಿ ಕಾರ್ಮಿಕರ ಸಹಿತ ವಿವಿಧ ಕಟ್ಟಡ ಕಾಮಗಾರಿಗಳಿಗೆ ಸಾಮಾಗ್ರಿಗಳು ದೊರೆಯದೇ ಇಡೀ ಜಿಲ್ಲೆಯು ತೊಂದರೆಗೊಳಗಾದ ಬಗ್ಗೆ ಮತ್ತು ಜಿಲ್ಲಾಡಳಿತವು ಏಕಾ‌ಏಕಿ ಕೆಂಪು ಕಲ್ಲು ತೆಗೆಯುವ ಸಂಬಂಧ ೩ಎ ನಡಿ ನೀಡಿರುವ ಅನುಮತಿಗಳನ್ನು ರದ್ದು ಪಡಿಸಿರುವ ಬಗ್ಗೆ ಸಚಿವರ ಗಮನಕ್ಕೆ ತಂದು ಸದರಿ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದು ಹಾಗೂ ಕರಾವಳಿಯ ಉಳಿದ ಜಿಲ್ಲೆಗಳಲ್ಲಿ ಇರುವಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ಹಿಂದೆ ನೀಡುತ್ತಿದ್ದಂತೆ ೩ಎ ನಡಿ ಕೆಂಪು ಕಲ್ಲು ತೆಗೆಯಲು ಈ ಕೂಡಲೇ ಅನುಮತಿ ನೀಡುವಂತೆ ಆಗ್ರಹಿಸಿದರು.

ಶಾಸಕರುಗಳ ಮನವಿಗೆ ಸ್ಪಂದಿಸಿದ ಸಚಿವರು ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ಸಮಸ್ಯೆ ಇತ್ಯರ್ಥ ಪಡಿಸುವಂತೆ ಸೂಚನೆ ನೀಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!