spot_img
Wednesday, April 1, 2026
spot_img

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ | ರಾಜ್ಯದಲ್ಲಿ 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣ : ಹೆಬ್ಬಾಳ್ಕರ್‌

ಜನಪ್ರತಿನಿಧಿ (ಬೆಳಗಾವಿ) : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯ ನೆರವು ದೊರೆಯುತ್ತಿದೆ. ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ₹2,000, ಆರ್ಥಿಕ ಸಹಾಯ ಯೋಜನೆಯಡಿ ₹30,000 ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ. ಅಂತೆಯೇ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದ್ದಾರೆ.

ಇನ್ನು, ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ ₹22,923 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಒಟ್ಟು 337 ಅಂಗನವಾಡಿ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿದೆ. ರಾಜ್ಯದಲ್ಲಿ ಹೊಸದಾಗಿ 3,988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!