spot_img
Wednesday, April 1, 2026
spot_img

ವಂಡ್ಸೆ ಶಾಲೆ: ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

 

ವಂಡ್ಸೆ, ಡಿ.13: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ವಾರ್ಷಿಕ ಕ್ರೀಡೋತ್ಸವ-2024 ಶುಕ್ರವಾರ ಶಾಲಾ ಮೈದಾನದಲ್ಲಿ ನಡೆಯಿತು.

ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಖಜಾಂಚಿ ಜಿ.ಶ್ರೀಧರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಮುಂದಿನ ಕ್ರೀಡಾಜೀವನಕ್ಕೆ ಶಾಲಾ ವಾರ್ಷಿಕ ಕ್ರೀಡಾಕೂಟಗಳು ಹೆಚ್ಚು ಸಹಕಾರಿ, ಕ್ರೀಡಾಸ್ಪೂರ್ತಿಯಿಂದ ಆಟವಾಡಿ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಟಿ. ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಗ್ರಾಮ ಪಂಚಾಯತ್ ಸದಸ್ಯ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಕ್ರೀಡಾಜ್ಯೋತಿ ಬೆಳಗಿಸಿದರು.

ಈ ಸಂದರ್ಭದಲ್ಲಿ ವಂಡ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ ಅಡಿಕೆಕೊಡ್ಲು, ಕರ್ಕುಂಜೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರವಿಚಂದ್ರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಜೀವ ವಂಡ್ಸೆ, ಸದಸ್ಯರಾದ ಸತೀಶ್, ಶಿಕ್ಷಕವೃಂದದವರು, ಎಸ್.ಡಿ.ಎಂ.ಸಿ ಸದಸ್ಯರು, ಕ್ರೀಡಾ ನಿರ್ಣಯಕರು ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರತಿನಿಧಿ ಆರಾಧ್ಯ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು. ಸಹಶಿಕ್ಷಕಿ ನಾಗವೇಣಿ ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ಅಂಗನವಾಡಿಯಿಂದ 7ನೇ ತರಗತಿಯ ತನಕ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆ ನಡೆಯಿತು. ವಿಜೇತ ವಿದ್ಯಾರ್ಥಿಗಳಿಗೆ ವಿಜಯ ವೇದಿಕೆಯಲ್ಲಿ ಪದಕ, ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.

ವಂಡ್ಸೆ ಶಾಲೆಯಲ್ಲಿ ಪ್ರತಿ ವರ್ಷ ವಾರ್ಷಿಕೋತ್ಸವ, ಕ್ರೀಡೋತ್ಸವ, ಪ್ರತಿಭೋತ್ಸವ, ಪೋಷಕರ ಕ್ರೀಡೋತ್ಸವ ಆಚರಿಸಿಕೊಳ್ಳುತ್ತಿದೆ. ಕ್ರೀಡೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಿರುವ ಈ ಶಾಲೆ ಕ್ರೀಡಾ ಸಾಧಕರನ್ನು ಗುರುತಿಸಿ, ಪದಕ ತೊಡಿಸಿ ಅಭಿನಂದಿಸುವ ಮಾದರಿ ಕಾರ್ಯ ಮಾಡುತ್ತಿದೆ.
ಇದೇ ಡಿಸೆಂಬರ್ ೨೧ ಶನಿವಾರ ಸಂಜೆ ೬ ಗಂಟೆಯಿಂದ ವೈಭವದ ಶಾಲಾ ವಾರ್ಷಿಕೋತ್ಸವ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!