spot_img
Wednesday, April 1, 2026
spot_img

ಕನ್ನಡ ಸಂಸ್ಕೃತಿ ಇಲಾಖೆಯ ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರ ನೇಮಕ | ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್‌ಗೆ ಗಣನಾಥ ಎಕ್ಕಾರು ನೇಮಕ

ಜನಪ್ರತಿನಿಧಿ (ಬೆಂಗಳೂರು/ಉಡುಪಿ) : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಬರುವ ಒಂಬತ್ತು ಪ್ರತಿಷ್ಠಾನ ಮತ್ತು ಟ್ರಸ್ಟ್‌ಗಳಿಗೆ ಕಾರ್ಯಕಾರಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಇಲಾಖೆಯಡಿ 24 ಟ್ರಸ್ಟ್‌, ಪ್ರತಿಷ್ಠಾನಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೆಲ ಟ್ರಸ್ಟ್, ಪ್ರತಿಷ್ಠಾನಗಳ ಕಾರ್ಯಕಾರಿ ಸಮಿತಿ ಅವಧಿ ಕೆಲ ತಿಂಗಳ ಹಿಂದೆಯೇ ಮುಕ್ತಾಯಗೊಂಡಿತ್ತು. ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಅಧ್ಯಕ್ಷರಾಗಿ ಬೆಂಗಳೂರಿನ ಬಿ.ಎಲ್. ಶಂಕ‌ರ್, ಸೂಳಿಭಾವಿಯ ಪಿ.ಬಿ. ಧುತ್ತರಗಿ ಟ್ರಸ್ಟ್‌ಗೆ ಸಂಗಪ್ಪ ಕಲ್ಲಪ್ಪ ಕೊನೆಸಾಗರ, ಉಡುಪಿಯ ಡಾ. ಶಿವರಾಮ ಕಾರಂತ ಟ್ರಸ್ಟ್‌ಗೆ ಗಣನಾಥ ಎಕ್ಕಾರು, ಬಾಗಲಕೋಟೆಯ ಕವಿ ಚಕ್ರವರ್ತಿ ರನ್ನ ಪ್ರತಿಷ್ಠಾನಕ್ಕೆ ಜಿಲ್ಲಾಧಿಕಾರಿ, ಮಂಡ್ಯದ ಪು.ತಿ.ನ. ಟ್ರಸ್ಟ್‌ಗೆ ಮೈಸೂರಿನ ಪ್ರೊ.ಎಂ.ಕೃಷ್ಣಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ವಿಜಯಪುರದ ಹಲಸಂಗಿ ಗೆಳೆಯರ ಟ್ರಸ್ಟ್‌ಗೆ ಜಿಲ್ಲಾಧಿಕಾರಿ, ಬೆಳಗಾವಿಯ ಡಾ. ಬಸವರಾಜ ಕಟ್ಟಿಮನಿ ಪ್ರತಿಷ್ಠಾನಕ್ಕೆ ರಾಯಭಾಗದ ಯಲ್ಲಪ್ಪ ಹಿಮ್ಮಡಿ, ಬೆಳಗಾವಿಯ ಶ್ರೀ ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ಗೆ ಧಾರವಾಡದ ವಿನಯ ನಾಯಕ ಅವರು ಅಧ್ಯಕ್ಷರಾಗಿದ್ದಾರೆ. ಮಂಡ್ಯದ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್‌ಗೆ ಕಿಕ್ಕೇರಿ ಕೃಷ್ಣಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ಜುಲೈನಲ್ಲಿ ನೇಮಕ ಮಾಡಲಾಗಿತ್ತು. ಈಗ ಸದಸ್ಯರನ್ನು ನೇಮಿಸಲಾಗಿದೆ.

ಈ ನೇಮಕಾತಿಯು ಮುಂದಿನ ಮೂರು ವರ್ಷಗಳ ಅವಧಿಗೆ ಜಾರಿಯಲ್ಲಿ ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!