spot_img
Thursday, April 2, 2026
spot_img

ರಾಜೇಂದ್ರ ಬೆಚ್ಚಳ್ಳಿ ತೋಟದಲ್ಲಿ ಬೆಚ್ಚಳ್ಳಿ ಶಾಲೆ ವಿದ್ಯಾರ್ಥಿಗಳಿಗೆ ಕೃಷಿ, ಪರಿಸರ ಸಂರಕ್ಷಣೆ ಅರಿವು

ಹೊಸಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೆಚ್ಚಳ್ಳಿ ಇಲ್ಲಿನ ವಿಧ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಅರಿವು ಮೂಡಿಸುವ ಸಲುವಾಗಿ ಇಕೋ ಕ್ಲಬ್ ವತಿಯಿಂದ ಹೊರಸಂಚಾರ ಕಾರ್ಯಕ್ರಮವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭೋಜು ಪೂಜಾರಿ ಚಾರಿಟೇಬಲ್ ಟ್ರಸ್ಟ್ ರಿ ಬೆಚ್ಚಳ್ಳಿ ಇದರ ಅಧ್ಯಕ್ಷರು, ಪ್ರಗತಿಪರ ಕೃಷಿಕರು ಆದ ರಾಜೇಂದ್ರ ಬೆಚ್ಚಳ್ಳಿ ಇವರ ಕೃಷಿ ತೋಟದಲ್ಲಿ ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಅತಿಥಿ ಶಿಕ್ಷಕರು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಶಾಲೆಯ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ರಾಜೇಂದ್ರ ಬೆಚ್ಚಳ್ಳಿ ಇವರು ವಿಧ್ಯಾರ್ಥಿಗಳಿಗೆ ನೀರಿನ ಮಹತ್ವ, ಪ್ರಾಮುಖ್ಯತೆ, ರಕ್ಷಣೆ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು. ಸಾವಯವ ಗೊಬ್ಬರದ ಮೂಲಕ ಮಣ್ಣಿನ ಸಂರಕ್ಷಣೆ, ವಿವಿಧ ಜಾತಿಯ ಹಣ್ಣನ ತಳಿಗಳು, ಹೂವಿನ ತಳಿಗಳು, ತರಕಾರಿಯ ಬಗ್ಗೆ ಪರಿಚಯ ನೀಡಿದರು.ಇತ್ತೀಚಿನ ದಿನಗಳಲ್ಲಿ ಮಕ್ಕಳ ದುರಂತದ ಬಗ್ಗೆ ಪೋಷಕರಿಗೆ ಕೆಲವೊಂದು ಮುಂಜಾಗ್ರತ ಕ್ರಮಗಳನ್ನು ವಿವರಿಸಿದರು. ಮಕ್ಕಳಿಗೆ ಫಲಪುಷ್ಷ, ಊಟದ ವ್ಯವಸ್ಥೆ ,ಹಣ್ಣಿನ ಗಿಡಗಳನ್ನು ನೀಡುವುದರ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಉತ್ತಮ ಮಾರ್ಗದರ್ಶನ ನೀಡಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!